ಅಗ್ನಿಪಥ ಯೋಜನೆ ವಿರೋಧಿಸಿ ಸಿಕಂದರಾಬಾದ್ನಲ್ಲಿ ಉಂಟಾಗಿದ್ದ ಗಲಭೆಯ ಹಿಂದಿನ ಪ್ರಮುಖ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ.
ಆವುಲ ಸುಬ್ಬಾ ರಾವ್ನನ್ನು ಬಂಧಿಸಲಾಗಿದೆ. ಈತ ಮಾಜಿ ಸೈನಿಕ. ಅಗ್ನಿಪಥ ಯೋಜನೆ ಖಂಡಿಸಿ ತೆಲಂಗಾಣದ ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.ಈ ಹಿಂಸಾಚಾರದ ರೂವಾರಿ ಈತನೇ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ – ದ್ವಿತೀಯ PUC ಪರೀಕ್ಷೆ: ಕೊಪ್ಪಳದ ಅಪ್ಪ-ಮಗ ಪಾಸ್: ತಂದೆಗೆ ಹೆಚ್ಚು ಅಂಕ
ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದ. ಈ ಎಲ್ಲಾ ಘಟನೆಗೂ ಈತನೇ ಕಾರಣ ಎಂದು ತಿಳಿದುಬಂದಿದೆ.
ವಾಟ್ಸಾಪ್ ಮೂಲಕ ಮೆಸೇಜ್ ಕಳುಹಿಸಿ ಹೆಚ್ಚು ಜನರನ್ನು ಸೇರಿಸಿ ಗಲಭೆ ಸೃಷ್ಟಿಸಲು ಈತ ಪ್ರಚೋದನೆ ನೀಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಂಧಿತ ರಾವ್ ಆಂದ್ರಪ್ರದೇಶದ ಪ್ರಕಾಶಮ್ ಜಿಲ್ಲೆಯವನು.
ಕಳೆದ ಕೆಲವು ವರ್ಷಗಳಿಂದ ನರಸರಾವ್ಪೇಟೆ, ಹೈದರಾಬಾದ್ ಮತ್ತು ಸೇರಿದಂತೆ 7 ಕಡೆ ಸೇನಾ ಆಕಾಂಕ್ಷಿಗಳಿಗಾಗಿ ತರಬೇತಿ ಶಾಖೆಯನ್ನು ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ಅದೊನಿ, ಕರ್ನೂಲ್, ಗುಂಟೂರ್, ನೆಲ್ಲೂರು, ವಿಶಾಖಪಟ್ಟಣಂ ಮತ್ತು ಯಲಮಂಚಿಲಿಯಲ್ಲಿ ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ