ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಪರಾಕ್ರಮ, ಅಕ್ಷರ್ – ಅಶ್ವಿನ್ ಸ್ಪಿನ್ ಜೋಡಿಯ ಬೌಲಿಂಗ್ ದಾಳಿಯ ನೆರವಿನಿಂದ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ.
ಇದರೊಂದಿಗೆ ಟೆಸ್ಟ್ ಸರಣಿಯನ್ನು 3-1 ಗೆದ್ದುಕೊಂಡಿದ್ದಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲೇಗಿರಿತು.
ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ ಕೇವಲ 135 ರನ್ ಗಳಿಗೆ ಆಲ್ ಔಟಾಯಿತು. ಇದರೊಂದಿಗೆ ಭಾರತ ತಂಡ ಇನ್ನಿಂಗ್ಸ್ ಮತ್ತು 25 ರನ್ ಅಂತರದ ಗೆಲುವು ಸಾಧಿಸಿತು.
160 ರನ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಗೆ ಅಕ್ಷರ್ ಪಟೇಲ್ ಮತ್ತು ಅಶ್ವಿನ್ ಕಾಡಿದರು. ಇಬ್ಬರೂ ತಲಾ ಐದು ವಿಕೆಟ್ ಪಡೆದರು.
ಇಂಗ್ಲೆಂಡ್ ಪರ ಲಾರೆನ್ಸ್ 50 ರನ್ ಗಳಿಸಿ ಸ್ವಲ್ಪ ಪ್ರತಿರೋಧ ತೋರಿದರು. ಅಂತಿಮವಾಗಿ ಕೇವಲ 135 ರನ್ ಗೆ ಇಂಗ್ಲೆಂಡ್ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.
ಭಾರತ ಉತ್ತಮ ಮೊತ್ತ:
ಅದಕ್ಕೂ ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಉತ್ತಮ ಮೊತ್ತ ಕಲೆ ಹಾಕಿತು. ಶುಕ್ರವಾರದ ಆಟದಲ್ಲಿ ರಿಷಭ್ ಪಂತ್ ಶತಕ ಬಾರಿಸಿದ್ದರೆ, ಇಂದು ವಾಷಿಂಗ್ಟನ ಸುಂದರ್ ಅಜೇಯ 97 ರನ್ ಗಳಿಸಿದರು.
ಭಾರತ ತಂಡ 365 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ 160 ರನ್ ಗಳ ಅಮೂಲ್ಯ ಮುನ್ನಡೆ ಸಾಧಿಸಿತ್ತು.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ 365 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಇದರೊಂದಿಗೆ 160 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಏಳು ವಿಕೆಟ್ ನಷ್ಟಕ್ಕೆ 297 ರನ್ ಗಳಿಸಿದ್ದಲ್ಲಿಂದ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆಲ್ ರೌಂಡರ್ ಗಳಾದ ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ನೆರವಾದರು. ಇವರಿಬ್ಬರೂ 106 ರನ್ ಗಳ ಜೊತೆಯಾಟ ನಡೆಸಿದರು. ಅಕ್ಷರ್ ಪಟೇಲ್ 43 ರನ್ ಗಳಸಿ ರನ್ ಔಟಾದರು.
96 ರನ್ ಗಳಿಸಿ ಚೊಚ್ಚಲ ಟೆಸ್ಟ್ ಶತಕದ ಆಸೆಯಲ್ಲಿದ್ದ ವಾಷಿಂಗ್ಟನ್ ಸುಂದರ್ ಗೆ ನಿರಾಸೆಯಾಯಿತು. ಅಕ್ಷರ್ ಪಟೇಲ್ ರನ್ ಔಟ್ ಆದರೆ, ಬೆನ್ನು ಬೆನ್ನಲ್ಲೇ ಇಶಾಂತ್ ಶರ್ಮಾ ಮತ್ತು ಸಿರಾಜ್ ಔಟಾದ ಕಾರಣ ತಂಡ ಆಲ್ ಔಟಾಯಿತು. ಕ್ರೀಸ್ ನ ಮತ್ತೊಂದು ತುದಿಯಲ್ಲಿ ನಿಂತಿದ್ದ ವಾಷಿಂಗ್ಟನ್ ಶತಕ ವಂಚಿತರಾಗಿ ನಿರಾಸೆಯಿಂದ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ