ಕೊರೋನಾ ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯದ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗಳಿಗೆ ಆಯ್ಜೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡುವುದು ನಿಶ್ಚಿತ ಎಂದು ಸಿಎಂ ಯಡಿಯೂರಪ್ಪ ಮಂಗಳವಾರ ಭರವಸೆ ನೀಡಿದರು.
ಈ ಬಗ್ಗೆ ಉಪನ್ಯಾಸಕರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಕೋವಿಡ್ ಹಿನ್ನೆಲೆಯಲ್ಲಿ ಕಾಲೇಜು ಆರಂಭ ತಡವಾಗುತ್ತಿದೆ. ಬೋಧಕರಿಗೆ ವರದಿ ಮಾಡಿಕೊಳ್ಳುವುದಕ್ಕೆ ತೊಂದರೆಯಾಗಬಾರದು ಎಂಬ ಅಂಶ ಗಮನದಲ್ಲಿಟ್ಟುಗೊಂಡು ಇನ್ನೂ ಆದೇಶ ಪತ್ರ ನೀಡಿಲ್ಲ. ಆದೇಶ ಪತ್ರ ನೀಡಿಲ್ಲ ಎಂಬ ಮಾತ್ರಕ್ಕೆ ನೇಮಕಾತಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಈ ನೇಮಕಾತಿ ಅವಧಿ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ರಾಜ್ಯ ಪಿಯುಸಿ ಉಪನ್ಯಾಸಕ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ತಿಂಗಳಾದರೂ ಆಯ್ಕೆ ಪತ್ರ ನೀಡಿಲ್ಲ. ಇದರಿಂದ ಉಪನ್ಯಾಸಕ ವರ್ಗದಲ್ಲಿ ಆತಂಕ ಮೂಡಿದೆ. ಆದೇಶ ಪತ್ರ ಕೈ ಸೇರದ ಹಿನ್ನಲೆ ಎಲ್ಲಿ ತಮ್ಮ ಆಯ್ಕೆ ಎಲ್ಲಿ ರದ್ದಾಗುತ್ತದೋ ಎಂಬ ಭಯದಲ್ಲಿ ನೂರಾರು ಅಭ್ಯರ್ಥಿಗಳು ಪಿಯುಸಿ ಮಂಡಳಿ ಎದುರು ಪ್ರತಿಭಟನೆ ನಡೆಸುತ್ತಿದ್ದರು.
ಅಭ್ಯರ್ಥಿಗಳ ಬೇಡಿಕೆ, ವಿಪಕ್ಷಗಳ ಮನವಿ ಬಳಿಕ ಎಚ್ಚೆತ್ತಿರುವ ಮುಖ್ಯಮಂತ್ರಿಗಳು ಈಗ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಈ ಆಯ್ಕೆ ಪ್ರಕ್ರಿಯೆಯನ್ನು ರದ್ದು ಮಾಡುವುದಿಲ್ಲ ಎಂದು ಅಭಯ ನೀಡಿದ್ದಾರೆ. ಇದರಿಂದ ಉಪನ್ಯಾಸಕ ವರ್ಗದವರು ನಿಟ್ಟುಸಿರು ಬಿಡುವಂತೆ ಆಗಿದೆ.
ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಕೂಡ ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು. ಜೆಡಿಎಸ್ ನಾಯಕ ಕುಮಾರಸ್ವಾಮಿ ಕೂಡ ಉಪನ್ಯಾಸಕರಿಗೆ ಆದೇಶ ಪತ್ರ ನೀಡದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಎರಡು ತಿಂಗಳಾದರೂ ಆಯ್ಕೆ ಪತ್ರ ಕೊಡದಿದ್ದರೆ ಹೇಗೆ? ಕೋವಿಡ್ ಹಿನ್ನಲೆಯಲ್ಲಿ ಕಾಲೇಜ್ಗಳು ಮುಚ್ಚಿವೆ ಎಂಬುದು ಎಲ್ಲರಿಗೂ ಅರಿವಿದೆ. ಅಭ್ಯರ್ಥಿಗಳು ತಮಗೆ ಸಂಗಳ ನೀಡಿ ಎಂದು ಕೇಳುತ್ತಿಲ್ಲ. ಬದಲಾಗಿ ಆದೇಶ ಪತ್ರ ಮಾತ್ರ ಮಾತ್ರ ನೀಡಿ ಎಂದು ಕೋರುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದಿದ್ದರು.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ