January 28, 2026

Newsnap Kannada

The World at your finger tips!

WhatsApp Image 2024 11 20 at 5.37.48 PM

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ

Spread the love

ಮಂಡ್ಯದಲ್ಲಿ ಡಿಸೆಂಬರ್ 20,21 ಮತ್ತು 22ರಂದು ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನವೆಂಬರ್ 20 ರಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನು ಅಂತಿಮಗೊಳಿಸಲಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಸಂಘಟಕರಾಗಿದ್ದ ಗೊ.ರು ಚನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡರು-ಅಕ್ಕಮ್ಮ ದಂಪತಿಗಳಿಗೆ ಪುತ್ರರಾಗಿ ಮೇ 18 1930 ರಂದು ಜನಿಸಿದರು. ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದ ಇವರು 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದರು. ಸರ್ಕಾರಿ ಸೇವೆಯ ಜೊತೆಗೆ ವಿವಿಧ ಸಂಘ ಸಂಸ್ಥೆಗಳಿಗಾಗಿ ದುಡಿದಿದ್ದಾರೆ.ಇದನ್ನು ಓದಿ –ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ

ಜಾನಪದ ವಿದ್ವಾಂಸರಾದ ಇವರು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಮೊದಲಾದ ಕೃತಿಗಳನ್ನು ಅವರು ರಚಿಸಿದ್ದಾರೆ. ಗೊ.ರು ಚನ್ನಬಸಪ್ಪ ಅವರು ಈ ಹಿಂದೆ 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (1993), ಮಂಡ್ಯ (1994) ಮತ್ತು ಮುಧೋಳದಲ್ಲಿ (1995)ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

error: Content is protected !!