ಪರಪ್ಪನ ಅಗ್ರಹಾರ ಜೈಲಿಗೆ ತಮ್ಮನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ನಾಲ್ಕು ಮಂದಿ ಕ್ರಿಮಿನಲ್ ಕೈದಿಗಳು ಜೈಲಿನಲ್ಲೇ ಕ್ರಿಮಿನಾಶಕ ಸೇವಿಸಿದ ಘಟನೆ ಶಿವಮೊಗ್ಗದಲ್ಲಿ ಕಳೆದ ರಾತ್ರಿ ನಡೆದಿದೆ.
ಜಮೀರ್ ಜಾನಿ ಬಚ್ಚಾ (25), ನದೀಮ್ (21), ಇಮ್ರಾನ್ (26), ತೊಹಿಬ್ (24) ಕ್ರಿಮಿನಾಶಕ ಸೇವಿಸಿದ ಕೈದಿಗಳು.
ಈ ನಾಲ್ವರು ಕೈದಿಗಳು ಹಲವು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ, ಒಂದೇ ಸೆಲ್‍ನಲ್ಲಿದ್ದರು.
ಈ ಮೊದಲು ಇವರೆಲ್ಲಾ ಪರಪ್ಪನ ಅಗ್ರಹಾರ ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿ ಒಬ್ಬರಿಗೆ ಬೆದರಿಕೆ ಕರೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ವಿಚಾರಣೆಗೆಂದು ಪೊಲೀಸರು ಶಿವಮೊಗ್ಗಕ್ಕೆ ಕರೆ ತಂದಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ವಿಚಾರಣೆ ನಂತರ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.
ಆದರೆ ಕೈದಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುವಂತೆ ಅಧಿಕಾರಿಗಳಿಗೆ ಒತ್ತಡ ಹಾಕುತ್ತಿದ್ದರು. ಇದಕ್ಕೆ ಕಾರಗೃಹದ ಅಧಿಕಾರಿಗಳು ಒಪ್ಪಿರಲಿಲ್ಲ.
ಹೀಗಾಗಿ ನಾಲ್ವರು ಕೈದಿಗಳು ನಿನ್ನೆ ತಡರಾತ್ರಿ ಕ್ರಿಮಿನಾಶಕ ಔಷಧಿ ಸೇವಿಸಿದ್ದಾರೆ. ಕ್ರಿಮಿನಾಶಕ ಸೇವಿಸಿದ್ದ ಮೂವರು ಕೈದಿಯನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಕೈದಿಗೆ ಜೈಲಿನಲ್ಲಿ ಕಾರಾಗೃಹದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು