December 27, 2024

Newsnap Kannada

The World at your finger tips!

oscar

ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ವಿಧಿವಶ

Spread the love

ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಇಂದು ನಿಧನರಾದರು.

ಆಸ್ಕರ್ ಫರ್ನಾಂಡಿಸ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ
ಹಿರಿಯ ಸಮಾಜವಾದಿ ನಾಯಕ ಜಾಜ್೯ ಫರ್ನಾಂಡೀಸ್ ಸಹೋದರರೂ ಅಗಿದ್ದಾರೆ.

ಮಂಗಳೂರಿನ‌ ತಮ್ಮ ನಿವಾಸದಲ್ಲಿ
ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ  ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ನಾಯಕರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಮಾಜಿ ಸಚಿವ ಜನಾರ್ದನ ಪೂಜಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಫರ್ನಾಂಡಿಸ್ ಅವರ ಕುಟುಂಬಸ್ಥರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.

ಆಸ್ಕರ್ ಫರ್ನಾಂಡಿಸ್ ಮಾರ್ಚ್ 27, 1941ರಲ್ಲಿ ಉಡುಪಿಯಲ್ಲಿ ಜನಿಸಿದ್ದರು. ಜನವರಿ 18, 1980 ರಲ್ಲಿ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ 17 ಜೂನ್ 2013ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು. ಒಟ್ಟು ಐದು ಬಾರಿ ಉಡುಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಬಳಿಕ 2004ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಫರ್ನಾಂಡಿಸ್ ಗುರುತಿಸಿಕೊಂಡಿದ್ದರು. ಪಕ್ಷದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಮುಖ ನಾಯಕರ ಪೈಕಿ ಆಸ್ಕರ್ ಫರ್ನಾಂಡಿಸ್ ಸಹ ಒಬ್ಬರಾಗಿದ್ದರು. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಹ ಕೆಲಸ ಮಾಡಿದ್ದರು.

Copyright © All rights reserved Newsnap | Newsever by AF themes.
error: Content is protected !!