January 15, 2025

Newsnap Kannada

The World at your finger tips!

DORE

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ವಿಧಿವಶ

Spread the love

ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ (103) ಹೃದಯಾಘಾತದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದರು.

ಇತ್ತೀಚಿಗೆ ಕೊರೋನಾ ದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಆದರೆ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

HS Doreswamy COVID 120521 1200

1918 ಏಪ್ರಿಲ್ 10 ರಂದು ಹಾರೋಹಳ್ಳಿಯಲ್ಲಿ ಜನಿಸಿದ್ದ ದೊರೆಸ್ವಾಮಿ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಪಾಲ್ಗೊಂಡಿದ್ದರು. ಗಾಂಧೀಜಿ ಅವರ ಪ್ರಭಾವಕ್ಕೆ ಒಳಗಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮಿಕಿದ್ದರು.

ಗಾಂಧೀ ಸೇವಾ ಪ್ರಶಸ್ತಿ, ಬಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರೆಸ್ವಾಮಿ ಅವರನ್ನು ಅರಸಿಬಂದಿವೆ.

Srinivasaiah Doreswamy edited

Copyright © All rights reserved Newsnap | Newsever by AF themes.
error: Content is protected !!