ಹಿರಿಯ ಐಪಿಎಸ್ ಅಧಿಕಾರಿ, ರೈಲ್ವೇಯ ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗಾಗಿ ಇಂದು ಬೆಳಗ್ಗೆ ಮುಖ್ಯ ಕಾರ್ಯದರ್ಶಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲು ಈ ತಯಾರಿ ನಡೆಸಿದ್ದಾರೆಂದು ಹೇಳಲಾಗಿದೆ.
ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್ ಮತ್ತು ಸರ್ಕಾರಕ್ಕೆ ಪತ್ರ ಬರೆದು ಭಾಸ್ಕರ್ ರಾವ್ ಪತ್ರ ಬರೆದು ನಿರ್ಧಾರವನ್ನು ತಿಳಿಸಿದ್ದಾರೆ.
ಭಾಸ್ಕರ್ ರಾವ್ ಸೇವಾ ಅವಧಿ ಪೂರ್ಣಗೊಳ್ಳಲು ಇನ್ನೂ ಮೂರು ವರ್ಷ ಬಾಕಿಯಿದೆ. ಈಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವುದು ಅನೇಕ ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.
ಬೆಂಗಳೂರಿನ ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ 2020ರ ಜುಲೈನಲ್ಲಿ ಅವರನ್ನು ಸರ್ಕಾರ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಹುದ್ದೆಗೆ ವಗಾವಣೆ ಮಾಡಿತ್ತು. ಈಗ ರೇಲ್ವೆ ಇಲಾಖೆಯ ಎಡಿಜಿಪಿ ಆಗಿ ಕೆಲಸ ಮಾಡುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು