Categories: Main News

ಹಿರಿಯ ವಿದ್ವಾಂಸ ಹ. ಕ‌. ರಾಜೇಗೌಡರ ನಿಧನಕ್ಕೆ ಚುಂಚನಗಿರಿ ಜಗದ್ಗುರುಗಳ ತೀವ್ರ ಸಂತಾಪ

ಹಿರಿಯ ಜಾನಪದ ವಿದ್ವಾಂಸರೂ, ಸಂಶೋಧಕರೂ, ಸಾಹಿತಿಗಳೂ ಆಗಿದ್ದ ನಾಡಿನ ಹಿರಿಯ ಚೇತನ ಹ.ಕ.ರಾಜೇಗೌಡರು ಇನ್ನಿಲ್ಲ ವಾದುದು ಅತ್ಯಂತ ನೋವಿನ ಸಂಗತಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠಾಧೀಶ ಜಗದ್ಗುರು ನಿರ್ಮಲಾನಂದನಾಥ ಶ್ರೀ ಗಳು ಸಂತಾಪ ಸೂಚಿಸಿದ್ದಾರೆ.

ಶ್ರೀಗಳು ತಮ್ಮ ಸಂತಾಪ ಸಂದೇಶದಲ್ಲಿ ಕನ್ನಡ ಸಾಹಿತ್ಯ ಮತ್ತು ಜಾನಪದ ಕ್ಷೇತ್ರದಲ್ಲಿ ಅಪರಿಮಿತ ಪಾಂಡಿತ್ಯವನ್ನು ಹೊಂದಿ ಹತ್ತು ಹಲವು ಕೃತಿಗಳನ್ನು ರಚಿಸಿದ್ದ
ರಾಜೇಗೌಡರು ಜಾನಪದವನ್ನು ಅಧ್ಯಯನ ಮಾಡುವ ಯುವಪೀಳಿಗೆಯ ಮಾರ್ಗದರ್ಶಕರಾಗಿದ್ದರು ಎಂದಿದ್ದಾರೆ.‌

ಶ್ರೀ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಗುರು ದೇವತೆಗಳಲ್ಲಿ ಅಪಾರ ಶ್ರದ್ಧಾಭಕ್ತಿಯನ್ನು ಹೊಂದಿದ್ದ ಶ್ರೀಯುತರು ನಮ್ಮ ಸದ್ಗುರುಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಪದ್ಮಭೂಷಣ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಸೇವಾ ಕೈಂಕರ್ಯಕ್ಕೆ ಮಾರುಹೋಗಿದ್ದರು.

ಶ್ರೀ ಕ್ಷೇತ್ರದಲ್ಲಿ ಪದವಿ ಕಾಲೇಜನ್ನು ತೆರೆಯುವಲ್ಲಿ ಅವರ ಕೊಡುಗೆ ಸ್ಮರಣೀಯ. ಕ್ಷೇತ್ರದ ಬಗ್ಗೆ ಜಾನಪದೀಯ ಹಿನ್ನೆಲೆಯ ಸಂಶೋಧನಾತ್ಮಕ ಕೃತಿಯನ್ನೂ ರಚಿಸಿದ್ದರು.

ಪ್ರಸ್ತುತ ಶ್ರೀಮಠದ ವತಿಯಿಂದ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಒಳಗೊಂಡಂತೆ ಸ್ಥಾಪಿಸಿರುವ ವಿಕಸನ ಸಂಸ್ಥೆಯ ಮೂಲಕ 108 ಒಕ್ಕಲಿಗ ಸಾಧಕರ ಬಗ್ಗೆ ಕೃತಿಗಳನ್ನು ಪ್ರಕಟಿಸುವ ಕಾರ್ಯದಲ್ಲಿ ಶ್ರೀಯುತರು ವಹಿಸಿದ ಪ್ರಮುಖ ಪಾತ್ರ ಅವಿಸ್ಮರಣೀಯವಾದುದು. ಜೊತೆಗೆ ಒಕ್ಕಲಿಗರ ಸಾಧನೆ ಮತ್ತು ನಾಡಪ್ರಭು ಕೆಂಪೇಗೌಡರ ಇತಿಹಾಸವನ್ನು ರಚಿಸಬೇಕೆಂಬ ಶ್ರೀಮಠದ ಸತ್ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದರು. ನಾವು ಕಳೆದ ವಾರವಷ್ಟೇ ಶ್ರೀಯುತರ ನಿವಾಸಕ್ಕೆ ತೆರಳಿ ಅವರ ಆರೋಗ್ಯವನ್ನು ವಿಚಾರಿಸಿ ಬಂದಿದ್ದೆವು.

ಶ್ರೀಯುತರು ಸಾಹಿತ್ಯ ಮತ್ತು ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪರಿಮಿತ ಕೊಡುಗೆಯನ್ನು ಪರಿಗಣಿಸಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಪ್ರತಿಷ್ಠಿತ ಚುಂಚಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿದಂತಾಗಿ ಸಾಹಿತ್ಯ ಮತ್ತು ಜಾನಪದ ಕ್ಷೇತ್ರಕ್ಕೆ ಭರಿಸಲಾರದ ನಷ್ಟವುಂಟಾಗಿದೆ. ಭಗವಂತನು ಶ್ರೀಯುತರ ನಿಧನದಿಂದ ದುಃಖತಪ್ತರಾಗಿರುವ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ವೃಂದಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು, ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲೆಂದು ಆಶಿಸುತ್ತೇವೆ.

Team Newsnap
Leave a Comment
Share
Published by
Team Newsnap

Recent Posts

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024