ನೆಲಮಂಗಲ: ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ ಹಾಗೂ ಸ್ಕೂಲ್ ಬಸ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ.
ಘಟನೆಯ ವಿವರ:
ಅಪಘಾತದ ವೇಳೆ, ಹೆವಿ ಲೋಡ್ ಹೊಂದಿದ ಕಂಟೇನರ್ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ಅಪ್ಪಚ್ಚಿಯಾಗಿತ್ತು. ಕಾರಿನಲ್ಲಿದ್ದ ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36) ಮತ್ತು ಆರ್ಯ (6) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಟ್ರಾಫಿಕ್ ಸಮಸ್ಯೆ:
ಘಟನೆಯ ಪರಿಣಾಮ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಟ್ರಾಫಿಕ್‌ನ ನಿಯಂತ್ರಣಕ್ಕೆ ಸ್ಥಳೀಯ ಪೊಲೀಸರು ಹರಸಾಹಸ ಪಟ್ಟು ಕೆಲಸ ನಡೆಸಿದ್ದಾರೆ.
ಕಂಟೇನರ್ ತೆರವು:
ಅಪಘಾತದ ಸ್ಥಳದಲ್ಲಿ ಕಂಟೇನರ್ ಹೊರತೆಗೆದಲು ಲಾರಿ ಬೆಲ್ಟ್, ಚೈನ್ ಹಾಗೂ ಮೂರು ಕ್ರೇನ್‌ಗಳನ್ನು ಬಳಸಲಾಯಿತು. ಕೊನೆಗೆ ಹರಸಾಹಸ ಪಟ್ಟು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಲಾಯಿತು.
ಇದನ್ನು ಓದಿ – ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
ಸ್ಥಳಕ್ಕೆ ಪೊಲೀಸರು ಭೇಟಿ:
ನೆಲಮಂಗಲ ಪೊಲೀಸರು ಹಾಗೂ SP ಸಿ.ಕೆ. ಬಾಬಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರಿನಲ್ಲಿದ್ದವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು, ಘಟನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ.
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ