- ಉತ್ತರ ಕನಾ೯ಟಕದ ಪ್ರಗತಿಗೆ ಒತ್ತು;- ಸ್ಪೀಕರ್
ಮಂಗಳೂರು:ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಖಾದರ್ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ ಎಂದರು.
ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.ಇದನ್ನು ಓದಿ –ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಫಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ