November 20, 2024

Newsnap Kannada

The World at your finger tips!

suprem

ಕರ್ನಾಟಕದ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚನೆ – ಸುಪ್ರೀಂ

Spread the love

ಕರ್ನಾಟಕದ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚನೆ ಮಾಡುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಭರವಸೆ ನೀಡಿದ್ದಾರೆ.

ಮುಂದಿನ ಬುಧವಾರದಿಂದ ಪೀಠ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಹೊಂದಿಕೊಂಡಂತೆ ಕೋರ್ಟ್ ಹಲವು ಗಣಿಗಾರಿಕೆ ಕಂಪನಿಗಳನ್ನು ಬಂದ್ ಮಾಡಲಾಗಿದೆ.

ಇದರಿಂದ ಹಲವು ಸಮಸ್ಯೆಗಳಾಗಿದ್ದು, ಆ ಭಾಗದ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ ಎಂದು ಹಿರಿಯ ವಕೀಲ ದುಷ್ಯತ್ ದವ್ ಕೋರ್ಟ್ ಗಮನಕ್ಕೆ ತಂದರು.

ಇದೇ ವೇಳೆ ಮಧ್ಯಪ್ರವೇಶ ಮಾಡಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕರ್ನಾಟಕ ಸರ್ಕಾರದ ಅರ್ಜಿಯನ್ನು ಉಲ್ಲೇಖಿಸಿದರು. ಕರ್ನಾಟಕದ ಗಣಿಗಾರಿಕೆಗೆ ಸಂಬಂಧಿಸಿದ ಹಲವು ಅರ್ಜಿಗಳು ಬಾಕಿ ಉಳಿದಿವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಶೀಘ್ರದಲ್ಲಿದಲ್ಲಿ ಪೀಠ ರಚನೆ ಮಾಡಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ, ಅರ್ಜಿಗಳ ವಿಲೇವಾರಿ ಮಾಡಲಾಗುವುದು ಎಂದರು.

Copyright © All rights reserved Newsnap | Newsever by AF themes.
error: Content is protected !!