ಜೈಪುರನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಮಾನತುಗೊಂಡಿದ್ದ ನ್ಯಾಯಾಧೀಶರೊಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
ಜಿತೇಂದ್ರ ಸಿಂಗ್ ಬಂಧಿತ ಆರೋಪಿ. ಇವರನ್ನು ಜೈಪುರದಿಂದ ಭಾರತ್‌ಪುರಕ್ಕೆ ಕರೆತರಲಾಗಿದೆ.
ಸಿಂಗ್ ಅವರು ಭ್ರಷ್ಟಾಚಾರ ವಿರೋಧಿ ಪ್ರಕರಣಗಳ ವಿಶೇಷ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಆರೋಪಿ ಸಿಂಗ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನ್ಯಾಯಾಧೀಶರ ಸ್ಟೆನೋಗ್ರಾಫರ್ ಅಂಶುಲ್ ಸೋನಿ ಹಾಗೂ ನ್ಯಾಯಾಲಯದ ಸಿಬ್ಬಂದಿ ರಾಹುಲ್ ಕತಾರ ಮತ್ತಿಬ್ಬರು ಆರೋಪಿಗಳಾಗಿದ್ದಾರೆ.
14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಜಿತೇಂದ್ರ ಸಿಂಗ್ ವಿರುದ್ಧ ಆರೋಪ ಕೇಳಿಬಂದಿತ್ತು. ಎಫ್‌ಐಆರ್ ಆಧರಿಸಿ ರಾಜಸ್ಥಾನ್ ಕೋರ್ಟ್ ಆರೋಪಿಯನ್ನು ಅಮಾನತುಗೊಳಿಸಿತ್ತು. ಅಲ್ಲದೇ ಪ್ರಕರಣದ ತನಿಖೆಗೆ ತಂಡವೊಂದನ್ನು ನೇಮಿಸಿತ್ತು.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಲಾಯಿತು. ನಂತರ ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ವಯ ಅವರನ್ನು ಬಂಧಿಸಲಾಯಿತು ಎಂದು ಭಾರತ್‌ಪುರ ಎಸ್‌ಪಿ ದೇವೇಂದ್ರಕುಮಾರ್ ಬಿಶ್ನೋಯ್ ತಿಳಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ