January 28, 2026

Newsnap Kannada

The World at your finger tips!

rape

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ

Spread the love

ತುಮಕೂರು: ಮಧುಗಿರಿ ತಾಲ್ಲೂಕಿನಲ್ಲಿ ದೂರು ನೀಡಲು ಬಂದ ಮಹಿಳೆಯ ಮೇಲೆ ಡಿವೈಎಸ್‌ಪಿಯೊಬ್ಬರು (DYSP) ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ದುರ್ಘಟನೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಈ ಕೃತ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟಿಸಿದೆ.

ಪಾವಗಡದಿಂದ ಬಂದ ಮಹಿಳೆ, ಜಮೀನು ವಿವಾದ ಸಂಬಂಧ ದೂರು ನೀಡಲು ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಭೇಟಿ ಮಾಡಿದ್ದಳು. ವಿಚಾರಣೆಯ ಹೆಸರಿನಲ್ಲಿ ಆಕೆಯನ್ನು ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಘಟನೆ ವೇಳೆ ಮಹಿಳೆಯೊಂದಿಗಿದ್ದ ವ್ಯಕ್ತಿ ಘಟನೆಯ ವಿಡಿಯೋ ಚಿತ್ರೀಕರಿಸಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿದೆ.

ಘಟನೆ ವೈರಲ್‌ ಆದ ಬಳಿಕ ಡಿವೈಎಸ್‌ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ನಡೆದಿದ್ದು, ಇದು ಇಡೀ ಪೊಲೀಸ್ ಇಲಾಖೆಯ ಗೌರವಕ್ಕೆ ಭಾರಿ ಹೊಡೆತವನ್ನು ತಂದಂತಾಗಿದೆ.

sexual assult

ಸಾಮಾಜಿಕ ಜಾಲತಾಣಗಳಲ್ಲಿ ಈ ಕೃತ್ಯದ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಲಾಗುತ್ತಿದೆ. ಸಂತ್ರಸ್ತ ಮಹಿಳೆ ಮತ್ತು ಆರೋಪಿತನಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸುತ್ತಿದ್ದಾರೆ.

ಸಾರ್ವಜನಿಕರು ಮತ್ತು ಮಹಿಳಾ ಹಕ್ಕು ಸಂಘಟನೆಗಳು ಈ ಘಟನೆಗೆ ನ್ಯಾಯ ಒದಗಿಸಲು ಸರ್ಕಾರದಿಂದ ತಕ್ಷಣದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.ಇದನ್ನು ಓದಿ –ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಈ ರೀತಿಯ ಘಟನೆಗಳು ಪೊಲೀಸ್ ಇಲಾಖೆಯ ಮೇಲೆ ನಿಲುವಿನ ಪ್ರಶ್ನೆಯನ್ನು ಎಬ್ಬಿಸುತ್ತಿದ್ದು, ಇದಕ್ಕೆ ಕಾನೂನುಬದ್ಧ ದುರಸ್ತಿಯ ಅಗತ್ಯವಿದೆ.

error: Content is protected !!