ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಆರು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಿರುವ ಘಟನೆ ನಡೆದಿದೆ.
ಸೋಮವಾರ ರಾತ್ರಿ ಈ ದಾರುಣ ಘಟನೆ ಸಂಭವಿಸಿದ್ದು, ಬಿಹಾರ ಮೂಲದ ಅಭಿಷೇಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.
ಘಟನೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ನಡೆದಿದ್ದು, ಬಾಲಕಿ ನೇಪಾಳ ಮೂಲದ ಕುಟುಂಬಕ್ಕೆ ಸೇರಿದವಳಾಗಿದ್ದು, ಆಕೆಗೆ ಆರು ವರ್ಷ ವಯಸ್ಸು ಎಂಬುದು ತಿಳಿದುಬಂದಿದೆ. ಮೃತ ಬಾಲಕಿಯ ತಂದೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.
ಆರೋಪಿ ಅಭಿಷೇಕ್ ದೌರ್ಜನ್ಯ ಎಸಗಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯರು ಆತನನ್ನು ಹಿಡಿದು ಧರ್ಮದೇಟು ಕೊಟ್ಟಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರಿಂದ ಆರೋಪಿಯನ್ನು ರಕ್ಷಿಸಿ ಬಂಧಿಸಿದ್ದಾರೆ.ಇದನ್ನು ಓದಿ –ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
ಸ್ಥಳದಲ್ಲಿ ಹೆಚ್ಚು ಜನ ಸೇರಿದ್ದರಿಂದ ಪೊಲೀಸರು ಗುಂಪು ಚದುರಿಸಲು ಲಾಠಿ ಬೀಸುವಂತಾಯಿತು. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.
More Stories
ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
ಸಂಕ್ರಾಂತಿ….
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ