January 30, 2026

Newsnap Kannada

The World at your finger tips!

crime scene

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ

Spread the love

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಶಿಕ್ಷಕ ಮಂಜುನಾಥ್, ವಿದ್ಯಾರ್ಥಿನಿಯರ ಮೇಲೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರೆಂಬ ಆರೋಪಗಳ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದರು.

ಆಯೋಗದ ಸಹಾಯವಾಣಿಗೆ ಪೋಷಕರು ಕರೆ ಮಾಡಿ ಘಟನೆಯ ಕುರಿತು ಮಾಹಿತಿ ನೀಡಿದ ಬಳಿಕ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಿಸಿದರು. ತನಿಖೆಯ ಬಳಿಕ ಆರೋಪವನ್ನು ದೃಢೀಕರಿಸಿದ ಪೊಲೀಸರು, ಮಂಜುನಾಥ್ ನನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.ಇದನ್ನು ಓದಿ –ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಮತ್ತು ವಿದ್ಯಾರ್ಥಿನಿಯ ಪೋಷಕರು ಆತಂಕ ವ್ಯಕ್ತಪಡಿಸಿದ್ದು, ಶಾಲೆಗಳ ಭದ್ರತೆ ಹಾಗೂ ವಿದ್ಯಾರ್ಥಿನಿಯರ ಭವಿಷ್ಯ ರಕ್ಷಣೆಯ ಕುರಿತಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

error: Content is protected !!