crime

ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಬಾಲ ಮಂಜುನಾಥ ಸ್ವಾಮೀಜಿ ಅರೆಸ್ಟ್‌

ತುಮಕೂರು : ಕುಣಿಗಲ್ (Kunigal) ತಾಲೂಕಿನ ಹಂಗರನಹಳ್ಳಿ ವಿದ್ಯಾಚೌಡೇಶ್ವರಿ ದೇವಸ್ಥಾನದ (Vidya Chowdeshwari) ಬಾಲ ಮಂಜುನಾಥ ಸ್ವಾಮೀಜಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ (Sexual Harassment Case) ನೀಡಿರುವ ಆರೋಪದ ಮೇಲೆ ಬಂಧಿಸಲಾಗಿದೆ.

ಮಠದ ಮಾಜಿ ಆಪ್ತ ಸಹಾಯಕ ಅಭಿಷೇಕ್‌ ಹಾಗೂ ಸಹಚರರು ಗುಪ್ತಾಂಗ ವ್ಯಾಧಿ ವೇಳೆ ವೈದ್ಯರಿಗೆ ತೋರಿಸಿದ ವೀಡಿಯೋ ಇಟ್ಟುಕೊಂಡು ನನ್ನನ್ನು ಬ್ಲಾಕ್ ಮೇಲ್ ಮಾಡುತಿದ್ದಾರೆ ಎಂದು ಸ್ವಾಮಿಜಿ ತಮ್ಮ ಹಾಲಿ ಆಪ್ತ ಸಹಾಯಕ ಅಭಿಲಾಷ್ ಮೂಲಕ ಸೆನ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ದೂರು ಬಾಲ ಮಂಜುನಾಥ ಸ್ವಾಮಿಜಿಗೆ ರಿವರ್ಸ್ ಆಗಿದ್ದು , ಅದೇ ಆರೋಪಿಗಳು ಸ್ವಾಮೀಜಿಯವರ ಬೇರೊಂದು ಹಗರಣವೊಂದನ್ನು ವಿಚಾರಣೆ ವೇಳೆ ಬಯಲು ಮಾಡಿದ್ದಾರೆ.

ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಬಾಲಮಂಜುನಾಥ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಪೋಕ್ಸೋ ಕೇಸ್ (Pocso Case) ದಾಖಲು ಮಾಡಲಾಗಿದ್ದು , ಈಗ ತುಮಕೂರು ಎಸ್‌ಪಿ ಅಶೋಕ್ ಕೆ.ವಿ ನೇತೃತ್ವದಲ್ಲಿ ಇಬ್ಬರನ್ನು ಬಂಧಿಸಿ ತನಿಖೆ ನಡೆಸುತಿದ್ದಾರೆ.

ಸ್ವಾಮೀಜಿ ಮಠದಲ್ಲೇ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಆರೋಪ ಬಂದಿದ್ದು ,ಅಭಿಷೇಕ್ ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಪ್ರಕರಣದ ವಿವರ

ಬಾಲ ಮಂಜುನಾಥ ಸ್ವಾಮೀಜಿ ಅಭಿಷೇಕ್ ಜೊತೆ ತಮಗೆ ಚರ್ಮ ರೋಗದ ಸಮಸ್ಯೆ ಕುರಿತಂತೆ ಹೇಳಿಕೊಂಡಿದ್ದು , ಅಭಿಷೇಕ್ ಮಹಿಳೆಯನ್ನು ಪರಿಚಯಿಸಿ ವೈದ್ಯ ಎಂದು ಹೇಳಿದ್ದಾರೆ.ಸ್ವಾಮೀಜಿಗೆ , ಮಹಿಳೆಗೆ ಚರ್ಮ ರೋಗ ತೋರಿಸಲು ಇಷ್ಟವಿಲ್ಲದ ಕಾರಣ ಅವರ ಮೊಬೈಲಿಗೆ ಫೋಟೋ ಕಳುಹಿಸಿದ್ದಾರೆ.ವ್ಯಾಧಿಯ ಬಗ್ಗೆ ವೈದ್ಯರ ಬಳಿ ಹೇಳಿಕೊಳ್ಳಲು ಸ್ವಾಮೀಜಿಗೆ ವೀಡಿಯೋ ಕಾಲ್‌ನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆಗ ಸ್ವಾಮೀಜಿಯವರು ಚರ್ಮ ವ್ಯಾಧಿಯಿರುವ ಜಾಗವನ್ನು ತೋರಿಸಿದ್ದಾರೆ.ಅದೇ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಅಭಿಷೇಕ್ ಹಾಗೂ ಮತ್ತಿತರರು ಸ್ವಾಮೀಜಿಯವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆಂದು ಮಠದ ದೇವಸ್ಥಾನದ ಟ್ರಸ್ಟಿ ಕೆ. ಅಭಿಲಾಷ್ ಎಂಬುವರು ಫೆಬ್ರವರಿ 10 ರಂದು ದೂರು ದಾಖಲಿಸಿದ್ದಾರೆ.

ಕುಣಿಗಲ್ ತಾಲೂಕಿನ ಹೊಸಕೆರೆ ಗ್ರಾಮದ ಎಚ್.ಎಸ್. ಅಭಿಷೇಕ್, ಬೆಂಗಳೂರಿನಲ್ಲಿರುವ ಯುವತಿ, ಪಾಂಡವಪುರ ಬಳಿಯ ವಿಜಯಕಾಳಿ ದೇವಸ್ಥಾನದ ರಾಜೇಶ್, ಶ್ರೀನಿವಾಸ್, ರಾಮನಗರ ಜಿಲ್ಲೆಯ ಕವನಪುರ ಗ್ರಾಮದ ಚೇತನ್, ಕುಣಿಗಲ್ ನ ನಂದೀಶ್ ಎಂಬುವರ ವಿರುದ್ಧ ದೂರು ದಾಖಲಾಗಿತ್ತು.ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ – ಓರ್ವ NIA ವಶಕ್ಕೆ

ಅಭಿಷೇಕ್ ಕರೆಯಿಸಿ ಪೊಲೀಸರು ವಿಚಾರಣೆ ನಡೆಸಿದಾಗ ಆತ ಸ್ವಾಮೀಜಿಯವರು ಹಲವು ದಿನಗಳ ಹಿಂದೆ ಮಠದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದಾಗಿ ಆರೋಪಿಸಿದ್ದು ,ಈ ವಿಚಾರ ಪೋಕ್ಸೋ ಕಾಯ್ದೆಯಡಿ ಬರುವುದರಿಂದ ಮಠಕ್ಕೆ ಆಗಮಿಸಿದ ಪೊಲೀಸರು ಕಳೆದ ರಾತ್ರಿ ಮಠದಲ್ಲಿ ಪರಿಶೀಲನೆ ನಡೆಸಿದಾಗ ಸಿಕ್ಕಿದ ಕೆಲವು ದಾಖಲೆಗಳನ್ನು ಆಧರಿಸಿ ಸ್ವಾಮೀಜಿಯವರನ್ನು ಬಂಧಿಸಿದ್ದಾರೆ.

Team Newsnap
Leave a Comment

Recent Posts

ರಾಣೇಬೆನ್ನೂರು ಸಮೀಪ ಕಾರು ಪಲ್ಟಿಯಾಗಿ ನಾಲ್ವರು ಸಾವು : 6 ಮಂದಿಗೆ ಗಾಯ

ರಾಣೇಬೆನ್ನೂರು : ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ 6 ಮಂದಿ ಗಾಯಗೊಂಡ… Read More

May 24, 2024

ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಅನುಮಾನಾಸ್ಪದ ಸಾವು : ಸಂಪೂರ್ಣ ವಿವರ

ಬೆಂಗಳೂರು : ಹೈಕೋರ್ಟ್ ವಕೀಲರಾದ ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಪೊಲೀಸ್ ಅಧಿಕಾರಿಗಳ ಮೂಲಗಳು ತಿಳಿಸಿವೆ. ಚೈತ್ರಾ… Read More

May 24, 2024

16ನೇ ವಯಸ್ಸಿನ ಭಾರತೀಯ ಬಾಲಕಿ ಮೌಂಟ್‌ ಎವರೆಸ್ಟ್‌ ಶಿಖರ ಏರಿ ಸಾಧನೆ

ನವದೆಹಲಿ : 12ನೇ ತರಗತಿ ವಿದ್ಯಾರ್ಥಿನಿ ಕಾಮ್ಯ ಕಾರ್ತಿಕೇಯನ್‌ ವಿಶ್ವದ ಅತಿ ಎತ್ತರದ ಮೌಂಟ್‌ ಎವರೆಸ್ಟ್‌ ಶಿಖರವನ್ನು ನೇಪಾಳ ಕಡೆಯಿಂದ… Read More

May 24, 2024

ಅರಮನೆ ಮಂಡಳಿ ಕಚೇರಿ ಮೇಲೆ ‘ಲೋಕಾ’ದಾಳಿ : ಲೆಕ್ಕವೇ ಇಲ್ಲದ 4 ಲಕ್ಷ ವಶ

ಮೈಸೂರು: ಅರಮನೆ ಮಂಡಳಿ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಪ್ರವೇಶ ದ್ವಾರ… Read More

May 23, 2024

‘ COMEDK ಪರೀಕ್ಷೆ’ ಫಲಿತಾಂಶ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ : ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ… Read More

May 23, 2024

ಲೋಕ ಚುನಾವಣೆ: ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪ ಬೇಡ: ಡಾ. ಕುಮಾರ

ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ, ಉತ್ತಮ… Read More

May 23, 2024