June 7, 2023

Newsnap Kannada

The World at your finger tips!

acid , attack , minor

Refusal of love in Kanakapura - acid attack on minor ಕನಕಪುರದಲ್ಲಿ ಪ್ರೀತಿ ನಿರಾಕರಣೆ - ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಧ್ಯಾಪಕ ಪಾರಾರಿ – ಅಮಾನತು

Spread the love

ವಿದ್ಯಾರ್ಥಿನಿಯರ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಾಧ್ಯಾಪಕನೊಬ್ಬನನ್ನು ಅಮಾನತುಗೊಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಕಾಲೇಜವೊಂದರಲ್ಲಿ ಜರುಗಿದೆ

ದಾದಾ ರಾಮ್‍ಚಂದ್ ಬಖ್ರು ಸಿಂಧು ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೋಫೆಸರ್ ರಾಕೇಶ್ ಗೆಡಮ್ ಅಮಾನತುಗೊಂಡಿರುವ ಪ್ರಾಧ್ಯಾಪಕ.

ತನ್ನ ವಿಭಾಗದ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ವಿರೋಧ ವ್ಯಕ್ತಪಡಿಸಿದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಅಲ್ಲದೇ ಕೆಲ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿಶ್ವವಿದ್ಯಾಲಯದ ಆಡಳಿತವು ಪ್ರೋಫೆಸರ್ ರಾಕೇಶ್ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದೆ. ಆತ ತಲೆಮರೆಸಿಕೊಂಡಿದ್ದಾನೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಲೈಂಗಿಕ ದೌರ್ಜನ್ಯ

error: Content is protected !!