ಬಾಲಿವುಡ್ನಲ್ಲಿ ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಕ್ಷಯ್ ಕುಮಾರ್, ಕಾರ್ತಿಕ್ ಆರ್ಯನ್ ಬಳಿಕ ಶಾರುಖ್,ಕತ್ರಿನಾಗೆ ಸೋಂಕು ತಗುಲ್ಲಿದೆ.
ಶಾರುಖ್ಗೆ ಕರೊನಾ ತಗುಲಿರುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಟ್ವೀಟ್ ಮೂಲಕ ತಿಳಿಸಿದ್ದು, ಈ ರಾಜ್ಯದ ರಾಯಭಾರಿಯಾಗಿರುವ ಶಾರುಖ್ ಅವರು ಶೀಘ್ರ ಗುಣಮುಖರಾಗಲೆಂದು ಅವರು ಪ್ರಾರ್ಥಿಸಿದ್ದಾರೆ.
Just came to know that our Brand Ambassador Shahrukh Khan has been detected covid positive. Pray fastest recovery for the superstar. Get well Shahrukh! Spring back asap!
— Mamata Banerjee (@MamataOfficial) June 5, 2022
ಇನ್ನು ಕರೊನಾ ದೃಢವಾಗಿರುವುದರಿಂದಲೇ ಐಫಾ ಅವಾರ್ಡ್ನಲ್ಲಿ ಕತ್ರಿನಾ ಭಾಗವಹಿಸಿಲ್ಲ.
ತನ್ನ ಪತಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತರೂ ಕತ್ರಿನಾ ಕಾರ್ಯಕ್ರಮಕ್ಕೆ ಹಾಜರಾಗದಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದೀಗ ಕತ್ರಿನಾಗೂ ಕರೊನಾ ಸೋಂಕು ತಗುಲಿರುವುದರಿಂದ ಪಾಲ್ಗೊಂಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಇದನ್ನು ಓದಿ – ಬೈಡನ್ ನಿವಾಸದ ಮೇಲೆ ವಿಮಾನ ಹಾರಾಟ – ದಾಳಿ ಭೀತಿ: ಸ್ಥಳಾಂತರ
ಮೇ 25 ರಂದು ನಡೆದ ನಿರ್ಮಾಪಕ ಕರಣ್ ಜೋಹರ್ ಅವರ 50ನೇ ಹುಟ್ಟುಹಬ್ಬ ಪಾರ್ಟಿಯಲ್ಲೇ ಕರೊನಾ ತಗುಲಿರಬಹುದು ಎಂದು ಹೇಳಲಾಗಿದೆ. ಸದ್ಯ ಇಬ್ಬರು ತಾರೆಯರು ಅವರವರ ಮನೆಯಲ್ಲಿ ಪ್ರತ್ಯೇಕ ಕ್ವಾರಂಟೈನ್ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿವಾಸದ ಮೇಲೆ ವಿಮಾನವೊಂದು ಹಾರಾಟ ನಡೆಸಿದ್ದು, ದಾಳಿಯ ಭೀತಿ ಕಾಡಿತು
ಬೈಡನ್ ಅವರನ್ನು ಹಾಗೂ ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ.
ಬೈಡನ್ ಅವರ ರೆಹೋಬೋತ್ ಬೀಚ್ ಬಳಿಯ ನಿವಾಸದ ಮೇಲೆ ನಿರ್ಬಂಧಿತ ವಾಯು ಪ್ರದೇಶದಲ್ಲಿ ಸಣ್ಣ ಖಾಸಗಿ ವಿಮಾನವೊಂದು ಹಾರಾಟ ನಡೆಸಿರುವುದು ಕಂಡುಬಂದಿದೆ.
ಈ ಹಿನ್ನೆಲೆ ದಾಳಿ ಭೀತಿಯಿಂದ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ