ಐಷಾರಾಮಿ ಹಡಗೊಂದರಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ್ದ ಆರೋಪದ ಮೇರೆಗೆ ಬಂಧಿಸಲಾಗಿದ್ದ ನಟ ಶಾರುಖ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅಜಿ೯ ವಜಾ ಮಾಡಿದ ಕೋರ್ಟ್ ಆರ್ಯನ್ ಸೇರಿ 8 ಮಂದಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಕೋರ್ಟ್ ಆದೇಶಿಸಿದೆ.
ಕೋರ್ಟ್ ಡ್ರಗ್ಸ್ ಕೇಸ್ ಸಂಬಂಧ ಆರ್ಯನ್ ಖಾನ್ಗೆ 7 ದಿನಗಳ ಎನ್ಸಿಬಿ ಕಸ್ಟಡಿಗೆ ನೀಡಿತ್ತು. ಇಂದಿಗೆ ಆರ್ಯನ್ 7 ದಿನಗಳ ಕಸ್ಟಡಿ ಅಂತ್ಯಗೊಂಡಿತ್ತು . ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರು.
ಈಗ ಮತ್ತೆ ವಿಚಾರಣೆ ನಡೆಸಿದ ಕೋರ್ಟ್ ಆರ್ಯನ್ಗೆ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.
ಇದುವರೆಗೂ ಡ್ರಗ್ಸ್ ಕೇಸಲ್ಲಿ 18 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಎಲ್ಲಾ ಆರೋಪಿಗಳನ್ನು ಬಂಧಿಸಿ ಎನ್ಸಿಬಿ ವಿಚಾರಣೆಗೆ ಒಳಪಡಿಸಿದೆ. 23 ವರ್ಷದ ಆರ್ಯನ್ ಖಾನ್ಗೆ ರೇವ್ ಪಾರ್ಟಿಗೆ ಆಹ್ವಾನ ಮಾಡಲಾಗಿತ್ತು. ಯಾರಿಗೆ ಕ್ಯಾಬಿನ್ ಕೂಡ ನೀಡಿರಲಿಲ್ಲ. ಹೀಗಾಗಿ ಡ್ರಗ್ಸ್ ಕೇಸ್ಗೂ ಆರ್ಯನ್ಗೂ ಯಾವುದೇ ಸಂಬಂಧವಿಲ್ಲ ಎಂದು ವಕೀಲ ಸತೀಶ್ ಮಾನೆಶಿಂಧೆ ಕೋರ್ಟ್ ಮುಂದೆ ವಾದಿಸಿದ್ದರು.
ಇನ್ನೊಂದಷ್ಟು ದಿನ ಕಸ್ಟಡಿಗೆ ನೀಡುವಂತೆ ಎನ್ಸಿಬಿ ಪರ ವಕೀಲರು ಕೋರ್ಟ್ಗೆ ಮನವಿ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ