ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯಕ್ಕೆ ರಾಜೀವ್ ಗಾಂಧಿ ಹೆಸರಿಗೆ ಬದಲಾಗಿ ಶಂಕರಾಚಾರ್ಯರ ಹೆಸರು ಇಡುವುದು ಸೂಕ್ತ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೈಗಡಿಗ್ರಾಮದಲ್ಲಿ ವರದಿಗಾರೊಂದಿಗೆ ಮಾತನಾಡಿದ ಸಚಿವೆ ಶೋಭಾ ಈ ಕ್ಯಾಂಪಸ್ ಗೆ ರಾಜೀವ್ ಗಾಂಧಿ ಹೆಸರು ಇದೆ. ಅದನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರು ಇಡಬೇಕು ಎಂಬ ಬೇಡಿಕೆ ಇದೆ ಎಂದರು.
ಹೆಸರು ಬದಲಾವಣೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಈ ಬಗ್ಗೆ ಪರಿಶೀಲನೆ ಮಾಡಲು ಒತ್ತಡ ಹಾಕುವುದಾಗಿ ಶೋಭಾ ಭರವಸೆ ನೀಡಿದರು.
ಸೆಪ್ಟೆಂಬರ್ 22 ರಂದು ಕೃಷಿ ರಫ್ತುದಾರರ ಸಮಾವೇಶ ಏರ್ಪಡಿಸಲಾಗಿದೆ. ಇಲ್ಲಿ ಕೃಷಿಗೆ ಸಂಬಂಧಿತ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದೂ ಇದೇ ವೇಳೆ ತಿಳಿಸಿದರು.
ದೇಗುಲ ತೆರವು ಸಂಬಂಧ ಪ್ರತಿಕ್ರಿಯೆ ನೀಡಿ, ದೇವಾಲಯಗಳನ್ನು ಒಡೆಯುವ ಮೊದಲು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆ ದೇಗುಲಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕೆಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು