crime

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ,ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ.

ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.

ಸಂತ್ರಸ್ತ ವ್ಯಕ್ತಿಯು ಹಾಯವಾಣಿ 63609 38947 ಈ ನಂಬರ್ ಅನ್ನು ಬೆಳಿಗ್ಗೆ 8 ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದ್ದು ,ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುತ್ತದೆ .

ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಈ ಮೂಲಕ ಸೂಚಿಸಲಾಗುತ್ತಿದೆ.

ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.

ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದ್ದು, ಹಿಂಜರಿಯಬೇಕಾದ್ದು, ಅವಮಾನ ಎಂದು ಭಾವಿಸಬೇಕಾದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ.

ಎಸ್‌ಐಟಿ ಈ ವಿಚಾರದಲ್ಲಿ ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊನಡೆದುಕೊಳ್ಳುತ್ತಿದ್ದು , ಅಗತ್ಯವಿರುವ ವೃತ್ತಿಪರ ಕೌನ್ಸೆಲರುಗಳು, ವೈದ್ಯರುಗಳು, ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್ ಐ ಟಿ ಪಡೆದುಕೊಂಡಿದೆ.ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ಈ ವಿಚಾರದಲ್ಲಿ ಸಾರ್ವಜನಿಕರು ಸ್ಪಂದಿಸುವುದು ಅವಶ್ಯಕವಾಗಿದೆ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದ್ದಾರೆ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024