ಡ್ರಗ್ಸ್ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ಆರ್ಯನ್ ಖಾನ್ ಆರೋಗ್ಯದ ಬಗ್ಗೆ ಎನ್‍ಸಿಬಿ ಅಧಿಕಾರಿಗಳ ಬಳಿ ವಿಚಾರಿಸುತ್ತಾ ಕಿಂಗ್ ಖಾನ್ ದಂಪತಿ ರಾತ್ರಿಯಿಡೀ ನಿದ್ದೆಗೆಟ್ಟು ಕುಳಿತಿದ್ದಾರೆ.
ಆರ್ಯನ್ ಜೈಲು ಸೇರಿದಾಗಿನಿಂದ ಶಾರೂಖ್ ಮನಸ್ಸಲ್ಲಿ ತಳಮಳ ಶುರುವಾಗಿದೆ. ಮಗ ಜೈಲಿನಲ್ಲಿ ಹೇಗೆ ದಿನಗಳನ್ನು ಕಳೆಯುತ್ತಿದ್ದಾನೋ ಎಂಬ ಚಿಂತೆ ಆರ್ಯನ್ ಪೋಷಕರಿಗೆ ಶುರುವಾಗಿದೆ.
ದಂಪತಿಗಳು ಮಗನ ಬಗ್ಗೆ ಯೋಚನೆ ಮಾಡುತ್ತಾ ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆ. ಊಟ- ತಿಂಡಿಯೂ ಇಲ್ಲದಾಗಿದೆ. ಅಲ್ಲದೆ ಪದೇ ಪದೇ ಎನ್‍ಸಿಬಿ ಅಧಿಕಾರಿಗಳಿಗೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿಕೊಳ್ಳುತ್ತಿದ್ದಾರೆ
ಎಂದು ಗೊತ್ತಾಗಿದೆ.
ನಿನ್ನೆ ಆರ್ಯನ್ ಖಾನ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ಮುಂಬೈ ಸೆಷನ್ಸ್ ಕೋರ್ಟ್ ಹೇಳಿದೆ.
ಬುಧವಾರ ಮಧ್ಯಾಹ್ನದ ಬಳಿಕ ಸುದೀರ್ಘ ವಿಚಾರಣೆ ನಡೆಯಲಿದೆ. ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡ ಬಳಿಕ ಸೆಷನ್ಸ್ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಹೀಗಾಗಿ ನಿನ್ನೆ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ವಿ.ವಿ ಪಾಟೀಲ್ ತನಿಖಾ ವರದಿ ಸಲ್ಲಿಸಲು ಎನ್‍ಸಿಬಿ(NCB) ಕಾಲಾವಕಾಶ ಕೇಳಿದ ಹಿನ್ನೆಲೆ ವಿಚಾರಣೆ ಮುಂದೂಡಿತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್