December 28, 2024

Newsnap Kannada

The World at your finger tips!

veen s

ಪ್ರಿಯಕರನ ಮದುವೆ ದಿನವೇ ಪ್ರಿಯತಮೆ ಆತ್ಮಹತ್ಯೆ : ಮತ್ತೊಬ್ಬಳಿಗೆ ತಾಳಿಕಟ್ಟಿ ಪರಾರಿಯಾದ ಉಪನ್ಯಾಸಕ

Spread the love

ತಾನು ಪ್ರೀತಿಸಿದ ಯುವಕ ಕೈಕೊಟ್ಟು ಮತ್ತೊಬ್ಬಳ ಜೊತೆ ಅವನು ವಿವಾಹ ನಡೆಯುತ್ತಿರುವ ವೇಳೆಯಲ್ಲೇ ಉಪನ್ಯಾಸಕಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ರೂಪ (28) ಎಂಬವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗದ ರೂಪಾ ಹಾಗೂ ಮುರಳಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಜಾತಿಯಲ್ಲಿ ಇಬ್ಬರು ಬೇರೆಯಾದರೂ ಇಬ್ಬರೂ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರು. ಮುರಳಿ ಡಿವಿಎಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ರೂಪಾ ಸಹ್ಯಾದ್ರಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದರು.

ಇದರೊಂದಿಗೆ ಇಬ್ಬರೂ ಪಿಎಚ್.ಡಿ ಯನ್ನು ಮಾಡುತ್ತಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇನ್ನೆರಡು ತಿಂಗಳಿನಲ್ಲಿ ಪಿಎಚ್‍ಡಿ ಪದವಿಧರೆಯಾಗುತ್ತಿದ್ದರು.

ಅಷ್ಟರಲ್ಲೇ ಪ್ರೀತಿಯಲ್ಲಿ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಇದರಿಂದ ಪಿಎಚ್‍ಡಿ ಡಾಕ್ಟರೇಟ್ ಪಡೆಯುವ ಕನಸೂ ನುಚ್ಚುನೂರಾಗಿದೆ. ರೂಪಾಪ್ರೀತಿ ವಿಷಯ ತಿಳಿದ ಪೋಷಕರೇ ಜಾತಿ ಬೇರೆಯಾಗಿದ್ದರೂ ಪರವಾಗಿಲ್ಲ. ಮಗಳು ಚೆನ್ನಾಗಿದ್ದರೆ ಸಾಕು ಎಂದು ಮುರಳಿ ಜೊತೆ ವಿವಾಹ ಮಾಡಲು ನಿರ್ಧರಿಸಿದ್ದರು.

ಆದರೆ ಮುರಳಿ ರೂಪಾಳಿಗೆ ಕೈಕೊಟ್ಟು ಇಂದು (ಭಾನುವಾರ) ಶಿವಮೊಗ್ಗದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿ ಎಂಬ ಯುವತಿಯೊಂದಿಗೆ ಮದುವೆ ಮಾಡಿಕೊಂಡಿದ್ದಾನೆ.

ಈ ಆಘಾತದಿಂದ ಮನನೊಂದ ರೂಪ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೂಪ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಲ್ಲವಿಗೆ ತಾಳಿ ಕಟ್ಟುತ್ತಿದ್ದಂತೆ ಮುರಳಿ ಕಲ್ಯಾಣ ಮಂಟಪದಿಂದಲೇ ಪರಾರಿಯಾಗಿದ್ದಾನೆ.

ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮುರಳಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!