ಶೆಟ್ಟರ್ , ಯೋಜನಾ ಆಯೋಗದ ಉಪಾಧ್ಯಕ್ಷ – ಸವದಿ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ?

Team Newsnap
1 Min Read
There is no discussion about Lok Sabha election contest: Jagdish Shettar ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್​ ಶೆಟ್ಟರ್​

ಬೆಂಗಳೂರು: ಬಿಜೆಪಿ ತೊರೆದ ಇಬ್ಬರು ಲಿಂಗಾಯತ ನಾಯಕರಿಬ್ಬರಿಗೂ ಕಾಂಗ್ರೆಸ್ ಪಕ್ಷ ಸರ್ಕಾರದಲ್ಲಿ ಉನ್ನತ ಹುದ್ದೆ ನೀಡಲು ತೀವ್ರ ಚಿಂತನೆ ನಡೆಸಿದೆ

ಜಗದೀಶ್ ಶೆಟ್ಟರ್‌ ಅವರಿಗೆ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ಡಿಕೆ ಶಿವಕುಮಾರ್‌ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಲಕ್ಷ್ಮಣ ಸವದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಾಧ್ಯತೆ ಇದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಭಾರೀ ಅಂತರದ ಗೆಲುವು ಸಾಧಿಸಿದ್ದರು. ರಾಜ್ಯ ಸರ್ಕಾರಿ ನೌಕರರಿಗೆ ಶೇ 4 ರಷ್ಟು ತುಟ್ಟಿ ಭತ್ಯೆ ಏರಿಕೆ

ಮತ್ತೊಂದೆಡೆ, ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಚುನಾವಣೆಯಲ್ಲಿ ಸೋಲನುಭವಿಸಿದ್ದರೂ ಶೆಟ್ಟರ್ ಅವರು ಪ್ರಮುಖ ಹುದ್ದೆ ನಿರೀಕ್ಷಿಸಿದ್ದರು.

Share This Article
Leave a comment