ಮರಳಿ ಗೂಡು ಸೇರಿದ ಶೆಟ್ಟರ್‌ : ಕಾಂಗ್ರೆಸ್ ಗೆ ‘ಕೈ’ – ‘ಕಮಲ’ಕ್ಕೆ ಜೈ

Team Newsnap
1 Min Read
  • ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್
  • ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷ ಸೇರ್ಪಡೆ

  • ಪಕ್ಷಕ್ಕೆ ಬರಮಾಡಿಕೊಂಡ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ


ನವದೆಹಲಿ:

ಮಾಜಿ ಮುಖ್ಯ ಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ನವದೆಹಲಿಯಲ್ಲಿ ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ ಯಾದವ್ ಸಮಕ್ಷಮದಲ್ಲಿ ಪಕ್ಷ ಸೇರ್ಪಡೆಯಾದರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿರುವ ಜಗದೀಶ್ ಶೆಟ್ಟರ್, ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದಾರೆ.

ದೆಹಲಿಯಿಂದಲೇ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಕರೆ ಮಾತನಾಡಿರುವ ಶೆಟ್ಟರ್ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ.

ಇ-ಮೇಲ್ ಮೂಲಕ ಬೇಡ ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದ್ದಾರೆ. ದೆಹಲಿಯಿಂದ ಖುದ್ದಾಗಿ ಬಂದು ಶೆಟ್ಟರ್ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಜೊತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿದ್ದು, ಬಿಜೆಪಿಗೆ ವಾಪಸ್ ಬರುವಂತೆ ಜಗದೀಶ್ ಶೆಟ್ಟರ್‌ಗೆ ಯಡಿಯೂರಪ್ಪ ಅವರಿಗೆ ಆಹ್ವಾನ ಕೊಟ್ಟಿದ್ದರು. ವರಿಷ್ಠರನ್ನು ಒಪ್ಪಿಸುತ್ತೇವೆ, ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು.

ನಾನು ಓಪನ್ ಆಗಿದ್ದೀನಿ. ಆದರೆ ಬಿಜೆಪಿಯ ನಂಬರ್ 1, 2 ಒಪ್ಪಿಗೆ ಕೊಟ್ಟು ಮಾತನಾಡಬೇಕು. ಮೋದಿ, ಅಮಿತ್ ಶಾ ಜೊತೆ ಮಾತಾನಾಡಿಸಬೇಕು. ಅಲ್ಲೇ ಮಾತುಕತೆ ಆಗಬೇಕು ಎಂದು ಶೆಟ್ಟರ್ ಹೇಳಿದ್ದರು. ಈ ಹಿನ್ನೆಲೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಸರ್ಕಸ್ ನಡೆಸಿ ಮಾತುಕತೆಗೆ ಒಪ್ಪಿಸಿದ್ದರು.

Share This Article
Leave a comment