ನನಗೆ ಯಾವ ದೊಡ್ಡ ಹುದ್ದೆ ಬೇಡ. ನನಗೆ ಶಾಸಕನಾಗಿ ಕೆಲಸ ಮಾಡುವ ಅವಕಾಶ ಕೊಟ್ಟಿದ್ದರೆ ಸಾಕಿತ್ತು ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಶಿರಸಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಈ ಹಿಂದೆ ನಿರ್ಧಾರ ಮಾಡಿದಂತೆ ರಾಜೀನಾಮೆ ನೀಡುತ್ತಿದ್ದೇನೆ. ನಾಯಕರು ನಿನ್ನೆ ನನ್ನನ್ನು ಸಂಪರ್ಕ ಮಾಡಿದ್ದರು. ನನ್ನ ಷರತ್ತು ಒಪ್ಪಲಿಲ್ಲ. ಇಂದು ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು, ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ: ಜಿಎಸ್ ಟಿ ಹೊರೆ ತಪ್ಪಿಲ್ಲ
ನಾನು ಉತ್ತರಕರ್ನಾಟಕದಲ್ಲಿ
ಪಕ್ಷಕ್ಕೆ ಸಹಕಾರ ಕೊಟ್ಟು ಸಂಘಟನೆ ಮಾಡಿದ್ದೇನೆ. ನನಗೆ ಯಾವುದೇ ಮುನ್ಸೂಚನೆ ಇಲ್ಲದೇ ಈ ರೀತಿ ಮಾಡಿರೋದು ಬೇಸರ ತರಿಸಿದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಬೆಳವಣಿಗೆಗೆ ಅವಕಾಶ ಮಾಡಿಕೊಟ್ಟಿದೆ. ಮೂಲವಾಗಿ ಬಿಜೆಪಿಯಲ್ಲಿದ್ದವರನ್ನು
ಹೊರಗಡೆ ಹಾಕಲಾಗುತ್ತಿದೆ. ಇದು ಮಾನಸಿಕವಾಗಿ ಬೇಸರ ತರಿಸಿದೆ ಎಂದು ತಿಳಿಸಿದರು
ಮುಂದಿನ ನಿರ್ಧಾರದ ಬಗ್ಗೆ ಹುಬ್ಬಳ್ಳಿಗೆ ಹೋಗಿ ಅಂತಿಮ ನಿರ್ಧಾರ ಮಾಡುತ್ತೇನೆ. ನಾನಿನ್ನು ಯಾರ ಜೊತೇನೂ ಮಾತಾಡಿಲ್ಲ, ಸಂಪರ್ಕ ಮಾಡಿಲ್ಲ ಎಂದರು
More Stories
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ