June 5, 2023

Newsnap Kannada

The World at your finger tips!

WhatsApp Image 2023 02 09 at 11.03.01 PM

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ : ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವುದಾಗಿ ಘೋಷಿಸಿದ್ದರು. ಅಲ್ಲದೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದ್ದರು.

ಈ ಕುರಿತಂತೆ ಸಿಎಂ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದು, ಶಿವಮೊಗ್ಗ ಜಿಲ್ಲೆಯ ಬಹು ದಿನಗಳ ಕನಸು ವಿಮಾನ ನಿಲ್ದಾಣವಾಗಿದೆ. ಈ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾನು ವೀಕ್ಷಿಸಿದ್ದೇನೆ. ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಸೇಲೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದರೇ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಅಭಿಪ್ರಾಯ ಪಟ್ಟಿದ್ದಾರೆ.

ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು. ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿರುವಂತ ಮಹನೀಯರ ಹೆಸರನ್ನು ಇಡುವಂತೆ ಕೋರಿದ್ದಾರೆ.

error: Content is protected !!