ಶಿವಮೊಗ್ಗಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ನಗರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಅವರು ಈ ಘೋಷಣೆ ಮಾಡಿದರು.ಮಂಡ್ಯದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಯುವಕ..!
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದಕ್ಕೆ ಯಡಿಯೂರಪ್ಪ ಬಹಳ ಪ್ರಯತ್ನ ಮಾಡಿದ್ದಾರೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಸಿದ್ಧವಾಗಿರುವುದು ದಾಖಲೆ ಎಂದಿದ್ದಾರೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಆ ದಿನ 3 ಲಕ್ಷ ಜನ ಸೇರಲಿದ್ದಾರೆ. ಆಗ ಪ್ರಧಾನಿ ನರೇಂದ್ರ ಮೋದಿ ಅವರೆ ವಿಮಾನ ನಿಲ್ದಾಣದ ಹೆಸರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
VISL ಕಾರ್ಖಾನೆ ಪುನಶ್ಚೇತನಗೊಳಿಸಲು ಕ್ರಮ
ಸಿಎಂ ಬೊಮ್ಮಾಯಿ VISL ಕಾರ್ಖಾನೆ ಕಾರ್ಮಿಕರಿಗೆ ನೆಮ್ಮದಿ ಸುದ್ದಿ ನೀಡಿದ್ದು, ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು. ಶಿವಮೊಗ್ಗದ ಐಬಿಯಲ್ಲಿ ಇಂದು VISL ಕಾರ್ಮಿಕ ಮುಖಂಡರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಕಾರ್ಖಾನೆಯನ್ನು ಮುಚ್ಚಲು ಬಿಡುವುದಿಲ್ಲ, ಅದನ್ನು ಪುನಶ್ಚೇತನಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.
VISL ಕಾರ್ಖಾನೆ ಉಳಿಸಲು ಆಗ್ರಹಿಸಿ ಕಾರ್ಖಾನೆ ಮುಂದೆ ಕಾರ್ಮಿಕರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚುವುದಕ್ಕೆ ಬಿಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು