June 5, 2023

Newsnap Kannada

The World at your finger tips!

shimoga , airport , BSY

Shimoga Airport B.S. Yeddyurappa's name nomination: CM Bommai announcement ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು ನಾಮಕರಣ : ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು : ಸಿಎಂ ಬೊಮ್ಮಾಯಿ ಘೋಷಣೆ

Spread the love

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಲಾಗುತ್ತದೆ. ಈ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶಿವಮೊಗ್ಗಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ನಗರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಅವರು ಈ ಘೋಷಣೆ ಮಾಡಿದರು.ಮಂಡ್ಯದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಯುವಕ..!

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದಕ್ಕೆ ಯಡಿಯೂರಪ್ಪ ಬಹಳ ಪ್ರಯತ್ನ ಮಾಡಿದ್ದಾರೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಸಿದ್ಧವಾಗಿರುವುದು ದಾಖಲೆ ಎಂದಿದ್ದಾರೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಆ ದಿನ 3 ಲಕ್ಷ ಜನ ಸೇರಲಿದ್ದಾರೆ. ಆಗ ಪ್ರಧಾನಿ ನರೇಂದ್ರ ಮೋದಿ ಅವರೆ ವಿಮಾನ ನಿಲ್ದಾಣದ ಹೆಸರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

VISL ಕಾರ್ಖಾನೆ ಪುನಶ್ಚೇತನಗೊಳಿಸಲು ಕ್ರಮ

ಸಿಎಂ ಬೊಮ್ಮಾಯಿ VISL ಕಾರ್ಖಾನೆ ಕಾರ್ಮಿಕರಿಗೆ ನೆಮ್ಮದಿ ಸುದ್ದಿ ನೀಡಿದ್ದು, ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು. ಶಿವಮೊಗ್ಗದ ಐಬಿಯಲ್ಲಿ ಇಂದು VISL ಕಾರ್ಮಿಕ ಮುಖಂಡರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಕಾರ್ಖಾನೆಯನ್ನು ಮುಚ್ಚಲು ಬಿಡುವುದಿಲ್ಲ, ಅದನ್ನು ಪುನಶ್ಚೇತನಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.

VISL ಕಾರ್ಖಾನೆ ಉಳಿಸಲು ಆಗ್ರಹಿಸಿ ಕಾರ್ಖಾನೆ ಮುಂದೆ ಕಾರ್ಮಿಕರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚುವುದಕ್ಕೆ ಬಿಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

error: Content is protected !!