ಶಿವಮೊಗ್ಗ ಜಿಲ್ಲೆಯ ಖ್ಯಾತ ಮೂಳೆ ತಜ್ಞರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಾ.ಲೋಲಿತ್ (40) ಮೃತ ದುರ್ದೈವಿ. ಶಿವಮೊಗ್ಗದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ.
ಶಿವಮೊಗ್ಗದ ಗೋಪಾಳದಲ್ಲಿರುವ ಮನೆಯಲ್ಲಿ ಬೆಳಗ್ಗೆ 6 ಗಂಟೆಗೆ ವೈದ್ಯರು ತಮ್ಮ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಡಾ.ಲೋಲಿತ್ ಆರೋಗ್ಯ ಸಮಸ್ಯೆ ಬಳಲುತ್ತಿದ್ದರು ಎನ್ನಲಾಗಿದ್ದು, ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ತುಂಗನಗರ ಪೊಲೀಸ್ ಠಾಣೆ ಯಲ್ಲಿ ಈ ಪ್ರಕರಣ ಜರುಗಿದೆ.
More Stories
ಸೈಕಲ್ ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ!
ಶಿವಮೊಗ್ಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆ:ಇಬ್ಬರು ಯುವಕರು ಸಾವು
ಖ್ಯಾತ ಗಮಕ ಕಲಾವಿದ ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ