ಶಿವಮೊಗ್ಗ ನಗರದಲ್ಲಿ ಹಿಂದೂ ಯುವಕನಿಗೆ ಚಾಕು ಇರಿದು ಹಲ್ಲೆ ಮಾಡಿದ ಪ್ರಕರಣದಿಂದಾಗಿ ಪ್ರಕ್ಷುಬ್ಧ ವಾತಾವರಣವಿದೆ.
ಈ ನಡುವೆ ಚಾಕುವಿಂದ ಹಲ್ಲೆ ಮಾಡಿದ ಪ್ರಮುಖ ಆರೋಪಿಗೆ ಪೋಲಿಸರು ಗುಂಡೇಟು ಹೊಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗೆ ಗುಂಡೇಟು :
ಶಿವಮೊಗ್ಗದಲ್ಲಿನ ಬಟ್ಟೆ ಅಂಗಡಿ ಕಾರ್ಮಿಕ ಪ್ರೇಮ್ ಸಿಂಗ್ ಅವರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಆರೋಪಿ ಮೊಹಮ್ಮದ್ ಜಬೀ ಅಲಿಯಾಸ್ ಚರ್ಬಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.
ಎನ್.ಟಿ ರಸ್ತೆಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ತಂಡ ಮೇಲೆ ಹಲ್ಲೆ ಮಾಡಿದ್ದ ಕಾರಣ ಪೊಲೀಸರು ಎಚ್ಚರಿಕೆ ನೀಡಿ ಗುಂಡು ಹಾರಿಸಿದ್ದಾರೆ. ಗಾಯಾಳು ಅರೋಪಿಯನ್ನು ಪೊಲೀಸರು ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.
ವಿನೋಭ ನಗರದ ಪಿಎಸ್ಐ ಮಂಜುನಾಥ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಬ್ಬರ ಬಂಧನ :
ನಗರದಲ್ಲಿ ಬಟ್ಟೆ ಅಂಗಡಿ ಕಾರ್ಮಿಕ ಪ್ರೇಮ್ ಸಿಂಗ್ ಅವರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರಿಂದ ಇಬ್ಬರನ್ನು ಬಂಧಿಸಲಾಗಿದೆ.
ಜೆ ಸಿ ನಗರದ ನದೀಮ್ ಹಾಗೂ ಬುದ್ಧ ನಗರದ ಅಬ್ದುಲ್ ರಹೆಮಾನ್ ಬಂಧಿತ ಆರೋಪಿಗಳಾಗಿದ್ದಾರೆ.
ಕಸ್ತೂರ ಬಾ ರಸ್ತೆಯಲ್ಲಿರುವ ನಂದಿನಿ ಸಿಲ್ಕ್ನಲ್ಲಿ ಕೆಲಸ ಮಾಡುತ್ತಿದ ಪ್ರೇಮ್ ಸಿಂಗ್ ಮಧ್ಯಾಹ್ನ ಅಂಗಡಿ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್ನ ತರಕಾರಿ ಮಾರುಕಟ್ಟೆಯ ಹತ್ತಿರ ಮನೆ ಕಡೆ ಹೋಗುವಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ.
ಇಂದು ಶಾಲಾ ಕಾಲೇಜಿಗೆ ರಜೆ :
ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ಇರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಡಿಸಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಸಂಬಂಧ ಕಾರ್ಯಾಚರಣೆ ನಡೆಸಿದ ದೊಡ್ಡಪೇಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಜೆ ಸಿ ನಗರದ ನದೀಮ್ ಹಾಗೂ ಬುದ್ಧ ನಗರದ ಅಬ್ದುಲ್ ರಹೆಮಾನ್ ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರ ಬಂಧನ ಬಳಿಕ ಪ್ರಕರಣದ ಪ್ರಮುಖ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದನಂತೆ. ಈ ವೇಳೆ ಆರೋಪಿ ಕಾಲಿಗೆ ಗುಂಡೀಟ್ಟ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ