ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಪಕ್ಷಾಂತರ ಪರ್ವ ಮತ್ತೆ ಶುರುವಾಗಿದೆ. ಜೆಡಿಎಸ್ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರು ತಮ್ಮ ಶಾಸಕನ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬೆಂಬಲಿಗರೊಂದಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಗೌಡರು ಜೆಡಿಎಸ್ ನಾಯಕರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸರಿಹೋಗದ ಕಾರಣ ಪಕ್ಷ ಬಿಟ್ಟಿದ್ದೇನೆ ಎಂಎಲ್‌ಸಿ ಎಲೆಕ್ಷನ್‌ನಲ್ಲಿನ ವಿಷಯದಲ್ಲಿ ಆದ ಸಣ್ಣ ಭಿನ್ನಾಭಿಪ್ರಾಯ ರಾಜೀನಾಮೆ ಕೊಡುವಂತಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತಿದ್ದೇನೆ ಎಂದು ತಿಳಿಸಿದರು.
ರಾಜಕೀಯದಲ್ಲಿ ಅಣ್ಣ-ತಮ್ಮಂದಿರೇ ಬೇರೆ ಆಗುತ್ತಾರೆ. ನಾನು ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗಿದ್ದಕ್ಕೆ ಅವರು ತಪ್ಪು ತಿಳಿದುಕೊಳ್ಳಬಾರದು. ಎಷ್ಟು ದಿನ ಋಣ ಇರುವಷ್ಟು ದಿನ ಇದ್ದೆವು. ಋಣ ತೀರಿತು, ಈಗ ನಮ್ಮ ಕ್ಷೇತ್ರದ ಜನ ಹೇಳಿದಂತೆ ರಾಜೀನಾಮೆ ಕೊಟ್ಟು ಹೋಗಿದ್ದೇವೆ ಎಂದರು.
ಕಾಂಗ್ರೆಸ್‌ನಲ್ಲಿ ನನಗೇ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಘೋಷಣೆ ಆಗಲಿದೆ. ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬರುವ ನಾಯಕ ನನ್ನ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿದರು.ಇದನ್ನು ಓದಿ –ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ಲಕ್ಷಾಂತರ ಭಕ್ತರ ಆಗಮನ
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
More Stories
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ