ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕಗ್ಗೊಲೆಯಾಗಿದ್ದಾರೆ. ಈ ರೀತಿ ನಮ್ಮ ಸರ್ಕಾರ ಬಂದ ಮೇಲೂ ಕೊಲೆ ಆಗಿರೋದು ನನಗೆ ನಾಚಿಕೆ ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಹ, ಕಾಂಗ್ರೆಸ್ ಅವಧಿಯಲ್ಲಿ ಪ್ರತಿ ಹತ್ಯೆ ಆದಾಗಲೂ ಸಿದ್ದರಾಮಯ್ಯ ರನ್ನು ಬೈಯುತ್ತಿದ್ದೆವು. ಇವತ್ತು ನಮ್ಮದೇ ಸರ್ಕಾರ ಇದೆ. ನಮ್ಮ ಕಾರ್ಯಕರ್ತ ಒಬ್ಬ ಹತ್ಯೆ ಆಗಿದ್ದಾನೆ. ಇದು ನನಗೆ ಅತೀವ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಿಜಬ್ ವಿಚಾರ ಬಂದಾಗ ರಾಜ್ಯಾದ್ಯಂತ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು. ಜೊತೆಗೆ ಕೋರ್ಟ್ ಮಧ್ಯಂತರ ಆದೇಶ ನೀಡಿದರೂ ಅದು ಪಾಲನೆ ಆಗುತ್ತಿಲ್ಲ. ಶಾಂತಿಗೆ ಭಂಗ ತರುವವರ ಮೇಲೆ ಹಾಗೂ 144 ಸೆಕ್ಷನ್ ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಆಗಲಿಲ್ಲ. ಈಗ ನಮ್ಮ ಕಾರ್ಯಕರ್ತ ಹತ್ಯೆ ಆಗಿದ್ದಾನೆ. ಘಟನೆ ಕುರಿತು ಸರ್ಕಾರ ಇನ್ಯಾವಾಗ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಪ್ರಶ್ನಿಸಿದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ