ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕೆಂಡ ಹಾಯ್ದರು.
ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಉತ್ಸವದ ವೇಳೆ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಕಟ್ಟಿಕೊಂಡವರು, ಈಡೇರಿದ ಮೇಲೆ ಕೆಂಡ ಹಾಯುವ ಪದ್ಧತಿ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ಪ್ರತಿ ವರ್ಷ ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿ ಭಕ್ತರು ಈ ಪದ್ಧತಿ ಅನುಸರಿಸುತ್ತಾರೆ. ಆದರೆ ದೇವರ ದರ್ಶನಕ್ಕೆ ತೆರಳಿದ್ದ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ ಕೆಂಡ ಹಾಯ್ದಿದ್ದಾರೆ.
ಶಿವರಾಮ್ ಹೆಬ್ಬಾರ್ ಕೂಡ ಹಿಂದೆ ಶ್ರೀ ವೀರಭದ್ರ ದೇವರಲ್ಲಿ ಹರಕೆ ಕಟ್ಟಿಕೊಂಡಿದ್ದು, ಅದು ನೆರವೇರಿರುವುದರಿಂದ ಅವರು ಸಹ ಕೆಂಡಹಾಯ್ದಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ