ದೆಹಲಿ: 2024ರ ಜಮ್ಮು ಮತ್ತು ಕಾಶ್ಮೀರ್ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಶೀಘ್ರದಲ್ಲೇ ಬರುವ ನಿರೀಕ್ಷೆಯಿದ್ದು, ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು, ಮ್ಯಾಜಿಕ್ ನಂಬರ್ ದಾಟಿ ಬಹುಮತದತ್ತ ಸಾಗುತ್ತಿದೆ.
ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 48 ಕ್ಷೇತ್ರಗಳಲ್ಲಿ ಬಿಜೆಪಿ ಬೃಹತ್ ಮುನ್ನಡೆ ಸಾಧಿಸಿದೆ. ಇದರಲ್ಲಿ 36 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಹೊಂದಿದೆ. ಐಎನ್‌ಎಲ್‌ಡಿ ಎರಡು ಕ್ಷೇತ್ರಗಳಲ್ಲಿ ಹಾಗೂ ಇತರರು ಇನ್ನೂ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆದಿದ್ದು, ಪ್ರಮುಖ ಪೈಪೋಟಿ ಪಕ್ಷಗಳಾದ ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಜನನಾಯಕ್ ಜನತಾ ಪಕ್ಷ (ಜೆಜೆಪಿ), ಮತ್ತು ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ನಡುವೆ ತೀವ್ರ ಪೈಪೋಟಿ ಉಂಟಾಗಿದೆ.ಇದನ್ನು ಓದಿ – ಲಂಚದ ಆರೋಪ : ರಾಜ್ಯದ ವಿವಿಧ RTO ಚೆಕ್‌ಪೋಸ್ಟ್‌ಗಳಲ್ಲಿ ಲೋಕಾಯುಕ್ತ ದಾಳಿ
ಜೆಜೆಪಿ ಆಜಾದ್ ಸಮಾಜ ಪಕ್ಷ (ಕಾನ್ಶಿ ರಾಮ್) ಜೊತೆಗೆ ಮೈತ್ರಿ ಮಾಡಿಕೊಂಡಿದ್ದರೆ, ಐಎನ್‌ಎಲ್‌ಡಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಜೊತೆ ಮೈತ್ರಿಯಲ್ಲಿದೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ