ಸಾರ್ವಜನಿಕರಿಂದ ಬಂದ ಹಲವು ದೂರುಗಳ ನಂತರ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ (Food Safety Department) ರಾಜ್ಯದ 500ಕ್ಕೂ ಹೆಚ್ಚು ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಕೆಯ ಬಗ್ಗೆ ಪರಿಶೀಲನೆ ನಡೆಸಿತು. ಈ ವೇಳೆ 35 ಮಳಿಗೆಗಳಲ್ಲಿ ಅಪಾಯಕಾರಿ ಪ್ಲಾಸ್ಟಿಕ್ ಬಳಕೆ ಕಂಡುಬಂದಿದೆ. ಈ ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ.
ಪರೀಕ್ಷಾ ನಿರೀಕ್ಷೆಯ ಭಾಗವಾಗಿ ಸಂಗ್ರಹಿಸಿದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಯಿತ್ತಾದರೆ, 35 ಮಾದರಿಗಳಲ್ಲಿ ಅಪಾಯಕಾರಕ ಪಿಎಫ್‌ಎಎಸ್ (PFAS) ರಾಸಾಯನಿಕ ಪತ್ತೆಯಾಗಿದೆ. ಈ ಕೆಮಿಕಲ್ ಶಾಖದ ಪರಿಣಾಮವಾಗಿ ಹೊರ ಬಿಡುವ ವಿಷಕಾರಿ ಅಂಶಗಳು ಆರೋಗ್ಯಕ್ಕೆ ತೀವ್ರ ಹಾನಿ ಉಂಟುಮಾಡಬಹುದು ಎಂದು ವರದಿ ಹೇಳಿದೆ.ಇದನ್ನು ಓದಿ –ಮಂಡ್ಯ: KSRTC ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ ಗೆ ಶರಣು
ಈ ಹಿನ್ನೆಲೆ, ಆಹಾರ ತಯಾರಿಕೆಯಲ್ಲಿ ಹಾನಿಕಾರಕ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಸಾರ್ವಜನಿಕರು ಆರೋಗ್ಯಕರ ಆಹಾರ ಸೇವನೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು