ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

Team Newsnap
1 Min Read

ಬೆಂಗಳೂರು : ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಯಾವ ಅಧಿಕಾರಿ : ಎಲ್ಲಿ ದಾಳಿ ?

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ರಾಣೆಬೆನ್ನೂರು ನಗರದ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

ಹಾವೇರಿಯ ಜಿಲ್ಲಾಧಿಕಾರಿ ಕಚೇರಿ ಸಮೀಪ ಇರುವ ನಿರ್ಮಿತಿ ಕೇಂದ್ರದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ತುಮಕೂರಿನಲ್ಲಿ ದಾಳಿ

ತುಮಕೂರಿನಲ್ಲಿ ಲೋಕಾಯುಕ್ತ ಪೊಲೀಸರು ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ

ತುಮಕೂರಿನ ಆರ್.ಟಿ. ನಗರದಲ್ಲಿರುವ ನರಸಿಂಹಮೂರ್ತಿ ಅವರ ಮನೆ ಮೇಲೆ ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ.

ಬೆಂಗಳೂರು ನಗರದಲ್ಲಿಯೂ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಸ್ಕಾಂ ತಾಂತ್ರಿಕ ವಿಭಾಗದ ನಿರ್ದೇಶಕ ರಮೇಶ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.ಪ್ರಧಾನಿ ಮೋದಿ ಹತ್ಯೆಗೆ ಸಂಚು: ದಕ್ಷಿಣ ಕನ್ನಡದ 16 ಕಡೆ ಎನ್ ಐ ಎ ದಾಳಿ

ಬಸವೇಶ್ವರನಗರದಲ್ಲಿರುವ ರಮೇಶ್ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ.

Share This Article
Leave a comment