KGF-2 ಚಲನಚಿತ್ರ ವೀಕ್ಷಣೆ ವೇಳೆ ಪ್ರೇಕ್ಷಕನ ಮೇಲೆ ಗುಂಡು ಹಾರಿಸಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ ಜರುಗಿದೆ.
ಈ ಘಟನೆಯಲ್ಲಿ ವಸಂತಕುಮಾರ ಎಂಬ ಯುವಕನಿಗೆ ಗುಂಡು ತಗುಲಿದೆ, ಯುವಕನ ಹೊಟ್ಟೆಯ ಭಾಗಕ್ಕೆ ಗುಂಡು ಹೊಕ್ಕಿದೆ. ಸದ್ಯ ಗಾಯಾಳುವಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ಖಚಿತ ಪಡಿಸಿದ ಎಸ್ಪಿ ಹನುಮಂತರಾಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದಿದ್ದಾರೆ.
ಚಿತ್ರ ನೋಡುವಾಗ ಎದುರುಗಡೆ ಸೀಟ್ ಮೇಲೆ ಕಾಲು ಹಾಕಿದ್ದಕ್ಕೆ ವಸಂತಕುಮಾರ ಹಾಗೂ ಆರೋಪಿ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ , ಜಗಳ ವಿಕೋಪಕ್ಕೆ ತಿರುಗಿದೆ. ಆಗ ವಸಂತಕುಮಾರನ ಮೇಲೆ ಗುಂಡು ಹಾರಿಸಿದ್ದಾರೆ. ವಸಂತ್ ಮೇಲೆ ಮೂರು ಸುತ್ತು ಗುಂಡು ಹಾರಿಸಲಾಗಿದೆ.
2 ಗುಂಡು ಕಾಲಿಗೆ, ಮತ್ತೊಂದು ಮಿಸ್‌ಫೈರ್ ಆಗಿದೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಹೊರಗಡೆ ಪ್ರೇಕ್ಷಕರು ಓಡಿ ಹೋಗಿದ್ದಾರೆ. ಕೆಜಿಎಫ್-2 ನೋಡಲು ನಾಲ್ವರ ಜೊತೆ ವಸಂತಕುಮಾರ ಬಂದಿದ್ದ, ಸದ್ಯ ಗುಂಡು ಹಾರಿಸಿದ ಆರೋಪಿಗಾಗಿ ತೀವ್ರ ಶೋಧ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು