ನಾನು ಜೆಡಿಎಸ್‍ನಲ್ಲೇ ಇರಬೇಕೆ? ಬೇಡ್ವಾ ಎನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ – ಜಿಟಿಡಿ

Team Newsnap
1 Min Read

ನಾನು ಜೆಡಿಎಸ್‍ನಲ್ಲೇ ಇರಬೇಕೆ ಅಥವಾ ಬೇಡ್ವಾ ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ. ಕ್ಷೇತ್ರದ ಮತದಾರರು ಹೇಳಿದ ಮಾತನ್ನು ಮಾತ್ರ ಕೇಳುತ್ತೇನೆ. ಕುಮಾರಸ್ವಾಮಿ ಅವರ ಯಾವುದೇ ಅಭಿಪ್ರಾಯ ಇದ್ದರು ನನ್ನ ನಿರ್ಧಾರ ಬದಲಾಗುವುದಿಲ್ಲ. ಎಂದು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವ ಊಹಪೋಹಗಳಿಗೆ ಶಾಸಕ ಜಿ.ಟಿ.ದೇವೆಗೌಡ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಜಿಟಿಡಿ ಅವರು, ನಾನು ಎಲ್ಲಿರಬೇಕು ಅಂತ ಜನರು ತೀರ್ಮಾನ ಮಾಡುತ್ತಾರೆ. ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಾಗ ನನಗೆ ಆಹ್ವಾನ ಇರಲಿಲ್ಲ ಎಂದರು

ಬೆಳವಾಡಿ ದೇವಾಲಯಕ್ಕೆ ಹಣವನ್ನು ನೀಡಿದ್ದೆ. ಆದರೂ ಆಹ್ವಾನ ಮಾಡಲಿಲ್ಲ. ಅದೇ ರೀತಿ ರಮ್ಮನಹಳ್ಳಿಗೂ ಆಹ್ವಾನ ಮಾಡಲಿಲ್ಲ. ಇದೀಗ ಕ್ಷೇತ್ರದಲ್ಲಿ ಕೆಲವು ಕಾಮಗಾರಿ ಉದ್ಘಾಟನೆ ನಡೆಯುತ್ತಿದೆ. ಅದಕ್ಕೆ ಸಿದ್ದರಾಮಯ್ಯ ಬರುತ್ತಿದ್ದಾರೆ. ಸ್ಥಳಿಯ ಶಾಸಕನಾಗಿ ನಾನು ಭಾಗಿಯಾಗುತ್ತಿದ್ದೇನೆ ಅಷ್ಟೆ ಎಂದರು.

ಕ್ಷೇತ್ರದ ಜನರು ಕರೆದಾಗ ನಾನು ಹೋಗಲೆ ಬೇಕು. ಈ ಹಿಂದೆ ಕೂಡ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಬೊಮ್ಮಾಯಿ ಅವರು ಬಂದಾಗಲು ಅವರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಆದರೆ ನಾನು ಪಕ್ಷ ಸೇರುವುದು, ಬಿಡುವುದು ಎಲ್ಲವೂ ಜನರಿಗೆ ಬಿಟ್ಟಿದ್ದು. ನಾನು ಈ ಬಗ್ಗೆ ಕ್ಷೇತ್ರದ ಜನರ ಬಳಿ ಅಭಿಪ್ರಾಯ ಕೇಳಿಲ್ಲ. ಇನ್ನು ಚುನಾವಣೆಗೆ ಸಾಕಷ್ಟು ಸಮಯ ಇದೆ. ಎಲ್ಲವೂ ಮತದಾರ ತೀರ್ಮಾನದಂತೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Leave a comment