ರಾಜ್ಯ ಸರ್ಕಾರಕ್ಕೆ ಇರುಸು ಮುರುಸು ಮಾಡುವ ಹೇಳಿಕೆ ನೀಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.
ಸಿಎಂ ಯಡಿಯೂರಪ್ಪ ನಾಯಕತ್ವದ ವಿರುದ್ಧ ಹೇಳಿಕೆ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ಕುರಿತು ಈಗ ಅಳೆದು ತೂಗಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ಕೊಟ್ಟು 10 ದಿನದೊಳಗೆ ಉತ್ತರಿಸುವಂತೆ ತಾಕೀತು ಮಾಡಿದೆ.
ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಉಲ್ಲೇಖಿಸಿ ನೋಟೀಸ್ ಜಾರಿ ಮಾಡಿದೆ. ನಾಯಕತ್ವ ವಿಚಾರ, ಸಿಎಂ ಬದಲಾವಣೆ, ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಟೀಕೆಗಾಗಿ ಶೋಕಾಸ್ ನೋಟಿಸ್ ನೀಡಲಾಗಿದೆ.
ಯತ್ನಾಳ್ ಬಿಜೆಪಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಹೈಕಮಾಂಡ್ ಬಿ ಫಾರಂ ನೀಡಿದೆ. ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಯೇ ನಿರ್ಧರಿಸಬೇಕು. ಹೀಗಾಗಿ ರಾಜ್ಯ ಬಿಜೆಪಿ ಇಷ್ಟು ದಿನ ಕೈ ಕಟ್ಟಿ ಕುಳಿತಿತ್ತು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಎರಡು ಸಲ ಶೋಕಾಸ್ ನೋಟಿಸ್ ನೀಡಿದಂತಾಗಿದೆ. 2019ರ ಅಕ್ಟೋಬರ್‍ನಲ್ಲಿ ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಬೇಸರದಿಂದ ದೆಹಲಿ ವರಿಷ್ಠರ ವಿರುದ್ಧವೇ ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಕೇಂದ್ರದ ಶಿಸ್ತು ಸಮಿತಿ ಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಈ ವೇಳೆ ನಾನು ನನ್ನ ಇತಿಮಿತಿಯಲ್ಲೇ ಮಾತಾಡಿದ್ದೇನೆ, ಯಾರ ವಿರುದ್ಧವೂ ಮಾತಾಡಿಲ್ಲ, ಜನರ ಬವಣೆ ನೋಡಿ ಮಾತಾಡಿದೆ ಎಂದು ಯತ್ನಾಳ್ ಕಾರಣ ಕೊಟ್ಟು ಬೀಸೋದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ