ಶ್ರದ್ಧಾ ಶೆಟ್ಟರ್ ರಾಜಕೀಯಕ್ಕೆ ಎಂಟ್ರಿ ಕೊಡುವ ಲಕ್ಷಣಗಳು ನಿಚ್ಚಳವಾಗಿವೆ.
ಈಕೆಗೆ ರಾಜಕಾರಣದ ಬೆಂಬಲವೇ ಇದೆ. ಸುರೇಶ ಅಂಗಡಿ ಕಿರಿಯ ಪುತ್ರಿ ಹಾಗೂ ಈಕೆ ಸಚಿವ ಜಗದೀಶ್ ಶೆಟ್ಟರ್ ಸೊಸೆ ಪಟ್ಟವೆ ರಾಜಕೀಯ ಎಂಟ್ರಿ ಗೆ ಬಹು ದೊಡ್ಡ ಶ್ರೀರಕ್ಷೆಯಾಗಲಿದೆ.
ತಂದೆ ಸುರೇಶ್ ಅಂಗಡಿ ಅಕಾಲಿಕ ನಿಧನದ ನಂತರ ಇದೇ ಮೊದಲ ಬಾರಿಗೆ ಪುತ್ರಿ ಶ್ರದ್ಧಾ ಶೆಟ್ಟರ್ ಬಹಿರಂಗ ಸಮಾರಂಭದಲ್ಲಿ ಕಾಣಿಸಿಕೊಂಡರು. ಇದು ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡುವ ದಾರಿಗಳು.
ಶ್ರದ್ಧಾ ಶೆಟ್ಟರ್ ಬೆಳಗಾವಿ ಎಪಿಎಂಸಿ ಆವರಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡರು.
ಕಾರ್ಯಕ್ರಮದ ನಂತರ ಲವಲವಿಕೆಯಿಂದ ಎಲ್ಲ ಕಡೆಗೂ ಓಡಾಡಿದ ಶ್ರದ್ಧಾ ಶೆಟ್ಟರ್ ರೈತರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ ದರು. ಮಹಿಳಾ ರೈತರನ್ನು ಅಪ್ಪಿಕೊಂಡು ಯೋಗಕ್ಷೇಮ ವಿಚಾರಿಸುತ್ತಿರುವುದು ಗಮನ ಸೆಳೆಯಿತು.
ತಂದೆ ಸುರೇಶ ಅಂಗಡಿ ನಿಧನದ ನಂತರ ಯಾವ ಕಾರ್ಯಕ್ರಮದಲ್ಲಿಯೂ ಬಹಿರಂಗವಾಗಿ ಶ್ರದ್ಧಾ ಕಾಣಿಸಿಕೊಂಡಿರಲಿಲ್ಲ. ಈಗ ಕಾಣಿಸಿಕೊಂಡಿರುವುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ