ಓಟದಲ್ಲಿ ಕೇವಲ 8.96 ಸೆಕೆಂಡ್‍ನಲ್ಲಿ 100 ಮೀ. ಕ್ರಮಿಸಿ ಕಂಬಳದಲ್ಲಿ ತಮ್ಮದೇ ದಾಖಲೆಯನ್ನು ಶ್ರೀನಿವಾಸ್ ಗೌಡ ಮುರಿದ್ದಾರೆ.
ಇಂಡಿಯನ್ ಉಸೇನ್ ಬೋಲ್ಟ್ ಎಂದೇ ಜನಪ್ರಿಯರಾಗಿರುವ ಕಂಬಳದ ವೀರ ಮಿಜಾರು ಶ್ರೀನಿವಾಸ್ ಗೌಡ ಈ ಹಿಂದಿನ ತಮ್ಮದೇ ದಾಖಲೆ ಮುರಿದಿದ್ದಾರೆ. ಕೇವಲ 9.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರವನ್ನು ಕ್ರಮಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆಯುತ್ತಿರುವ ಸೂರ್ಯ-ಚಂದ್ರ ಜೋಡುಕೆರೆ ಕಂಬಳದಲ್ಲಿ ಶ್ರೀನಿವಾಸಗೌಡ ಹೊಸ ದಾಖಲೆ ಬರೆದಿದ್ದಾರೆ.
ಕೇವಲ 8.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರವನ್ನು ಕ್ರಮಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನೇಗಿಲು ಹಿರಿಯ ವಿಭಾಗದ ಕೋಣಗಳನ್ನು ಓಡಿಸಿದ ಶ್ರೀನಿವಾಸ್ ಗೌಡ, ಕೇವಲ 11.21 ಸೆಕೆಂಡ್‍ಗಳಲ್ಲಿ 125 ಮೀಟರ್ ದೂರವನ್ನು ಕ್ರಮಿಸಿದ್ದಾರೆ. ಕೇವಲ 8.96 ಸೆಕೆಂಡ್‍ಗಳಲ್ಲಿ 100 ಮೀಟರ್ ತಲುಪಿದ್ದು, ಈ ಮೂಲಕ ಹಿಂದಿನ ಎಲ್ಲ ದಾಖಲೆಗಳನ್ನು ಸರಗಟ್ಟಿದ್ದಾರೆ.
2020ರ ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ