ಚನ್ನಪಟ್ಟಣ ತಾಲೂಕು ಅಕ್ಕೂರು ಪೋಲಿಸ್ ಠಾಣೆಯಲ್ಲೇ ಎಸ್ ಐ ಸರಸ್ವತಿ ಹುಟ್ಟು ಹಬ್ಬ ಆಚರಿಸಿ ಕೊಂಡ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ಸರ್ಕಾರಿ ಕಚೇರಿಗಳು, ಪೋಲಿಸ್ ಠಾಣೆಗಳೂ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮ, ಹುಟ್ಟು ಹಬ್ಬ ಆಚರಣೆಗೆ ಹಲವು ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಹಾಗೂ ಡಿಜಿ ಐಜಿಪಿ ಆದೇಶ ಹೊರಡಿಸಿದ್ದರೂ ಈ ಆದೇಶವನ್ನು ಉಲ್ಲಂಘನೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ, ಅಕ್ಕೂರು ಪೊಲೀಸ್ ಠಾಣೆಯ ಪಿಎಸ್ಐ ಸರಸ್ವತಿ ಠಾಣೆಯಲ್ಲಿನ ತಮ್ಮ ಚೇಂಬರ್ ನಲ್ಲಿ ಕೇಕ್ ಕತ್ತರಿಸಿ ಕೇಕ್ ತಿನ್ನಿಸುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.
ಗ್ರಾಮದ ಹಲವು ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ ಕಳೆದ ಎರಡು ತಿಂಗಳ ಹಿಂದೆ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮೂಲಕ ಪಿಎಸ್ಐ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಬರ್ತ್ಡೇ ಫೋಟೋಗಳು ವೈರಲ್ ಆಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು