ಮಾಂಸಹಾರ ಸೇವಿಸಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಮತ್ತೊಂದು ವಿವಾದ ಚರ್ಚೆಗೆ ಗ್ರಾಸವಾಗಿದೆ.
ಮಡಿಕೇರಿಗೆ ನೆರೆ ಸಂಕಷ್ಟಗಳನ್ನು ವೀಕ್ಷಿಸಲು ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ವಿಧಾನಪರಿಷತ್‍ನ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮನೆಯಲ್ಲಿ ಸಿದ್ದರಾಮಯ್ಯ ಮತ್ತು ಇತರ ಮುಖಂಡರು ಊಟ ಮಾಡಿದ್ದರು.ಇದನ್ನು ಓದಿ –ನ್ಯೂಜಿಲೆಂಡ್ ಎ ಸೀರೀಸ್- ಬಲಿಷ್ಠ ಭಾರತ ತಂಡಕ್ಕೆ ಶುಭ್ಮನ್ ಗಿಲ್ ಕ್ಯಾಪ್ಟ
ಸಂಜೆ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಆದರೆ ಮಾಂಸಾಹಾರ ಊಟ ಮಾಡಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ತೀವ್ರ ಚರ್ಚೆಗೂ ಗ್ರಾಸವಾಗಿದೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದ ವೇಳೆ ಧರ್ಮಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ ವೇಳೆಯೂ ಮೀನು ತಿಂದು ಹೋಗಿದ್ದಾರೆ ಎಂಬ ಅಪವಾದಗಳು ಕೇಳಿಬಂದಿದ್ದವು. ಈಗ ಮತ್ತದೇ ವಿವಾದ ಚರ್ಚೆಯಾಗುತ್ತಿದೆ.
ವಿಧಾನಪರಿಷತ್‍ನ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಮಡಿಕೇರಿ ಅತಿಥಿ ಸತ್ಕಾರ್ಯಕ್ಕೆ ಹೆಸರುವಾಸಿ. ಸಿದ್ದರಾಮಯ್ಯ ಅವರು ಬಂದಾಗ ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಕ್ಕಿ ರೊಟ್ಟಿ, ರಾಗಿ ಮದ್ದೆ, ಬಿದಿರಿನ ಕಣಲೆ,ನಾಟಿಕೋಳಿ ಮಾಂಸಾಹಾರವನ್ನು ಮಾಡಲಾಗಿತ್ತು. ಸಿದ್ದರಾಮಯ್ಯನವರಿಗೆ ನಾನೇ ಊಟ ಬಡಿಸಿದೆ. ಅವರು ಮಾಂಸಾಹಾರ ಬೇಡ ಎಂದು ಹೇಳಿ ಬಿದಿರಿನ ಕಣಲೆ ಸಾರಿನಲ್ಲಿ ಊಟ ಮಾಡಿದರು ಎಂದು ಸ್ಪಷ್ಟನೆ ನೀಡಿದರು.
ಬಿಜೆಪಿಯವರು ದುರುದ್ದೇಶಪೂರ್ವಕವಾಗಿ ಸಿದ್ದರಾಮಯ್ಯನವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇತ್ತ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿದ್ದರಾಮಯ್ಯನವರು, ಬಿಜೆಪಿಯವರ ಆರೋಪಕ್ಕೆ ಕಿಡಿಕಾರಿದ್ದಾರೆ. ಸುಳ್ಳು ಹಬ್ಬಿಸುವುದು, ಅಪಪ್ರಚಾರ ಮಾಡುವುದು ಬಿಜೆಪಿಯವರ ಜಾಯಮಾನ. ಹಿಂದಿನ ದಿನ ಮಾಂಸಾಹಾರ ಊಟ ಮಾಡಿ ಮಾರನೇ ದಿನ ದೇವಸ್ಥಾನಕ್ಕೆ ಹೋದರೆ ತಪ್ಪಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು