ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವಿ ಟ್ವಿಟರ್ ವಾಕ್ಸಮರ ಇದೀಗ ತಾರಕಕ್ಕೇರಿದೆ.
ನಳಿನ್ ಕುಮಾರ್ ಕಟೀಲ್ ವಿರುದ್ಧ ಸರಣಿ ಟ್ವೀಟ್ಗಳ ಖಡಕ್ ಆಗಿಯೇ ಉತ್ತರ ನೀಡಿರುವ ಬಿಜೆಪಿ ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ, ಸಿದ್ದರಾಮಯ್ಯ ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ಕಾಂಗ್ರೆಸ್ ಪಕ್ಷದ ವಿದೂಷಕ ಇದ್ದ ಹಾಗೆ ಹಾಗಿದೆ” ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಉಲ್ಲೇಖಿಸಿ “ಹುಲಿಯಾ ಕಾಡಿಗೆ, ಬಂಡೆ ಛಿದ್ರ” ಎಂದು ಹೇಳಿಕೆಗೆ ಇಂದು ಟ್ವಿಟರ್ನಲ್ಲಿ ತಿರುಗೇಟು ನೀಡಿದ್ದ ಸಿದ್ದರಾಮಯ್ಯ, “ನಳಿನ್ ಕುಮಾರ್ ಕಟೀಲ್ ಓರ್ವ ಕಾಡು ಮನುಷ್ಯ. ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಸಿದ್ದರಾಮಯ್ಯ ನವರೇ, ಕಾಂಗ್ರೆಸ್ ಸೇರುವುದುಕ್ಕೂ ಮುನ್ನ ಮೊದಲು ಜೆಡಿಎಸ್ ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೇ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ? ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವೇ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದು ಬರೆಯಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ