January 27, 2026

Newsnap Kannada

The World at your finger tips!

sidda

ಮೋದಿ, ಯಡಿಯೂರಪ್ಪ ಕೊರೋನಾಕ್ಕಿಂತಲೂ ಅಪಾಯಕಾರಿ- ಸಿದ್ಧರಾಮಯ್ಯ

Spread the love

ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪ
ಕೊರೋನಾಕ್ಕಿಂತಲೂ ಹೆಚ್ಚು ಅಪಾಯಕಾರಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

ಕೊರೊನಾ ಸೋಂಕಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ತಮ್ಮ ದುರಾಡಳಿತದ ಮೂಲಕ ಈ ಜೋಡಿ ದೇಶವನ್ನು ಮತ್ತು ರಾಜ್ಯವನ್ನು ಕೊರೊನಾ ಸೋಂಕಿನಲ್ಲಿ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಂತಿದೆ ಎಂದರು.

ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸೋಂಕಿನ ಸರಾಸರಿ 10,000 ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 100 ಸಾವುಗಳಾಗುತ್ತಿವೆ. ಇಲ್ಲಿಯವರೆಗೆ 6.68 ಲಕ್ಷ ಜನರಿಗೆ ಕೊರೊನಾ ಸೋಂಕು ತಗಲಿದೆ. 1.16 ಲಕ್ಷಕ್ಕೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,. ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೇ ಕೊರೋನಾ ಸೋಂಕು ಬಡಿದಂತಿದೆ ಎಂದು ಕುಟುಕಿದರು.

ರಾಜ್ಯದಲ್ಲಿ ಕೊರೊನಾ ಉಲ್ಭಣಗೊಳ್ಳಲು ಜನರ ನಿರ್ಲಕ್ಷ್ಯ ಕಾರಣ ಎಂಬ ಅತಿಪ್ರಚಾರದ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಕೊರೊನಾ ನಿಯಂತ್ರಣದಲ್ಲಿನ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

error: Content is protected !!