ಮಾಜಿ ಮುಖ್ಯಮಂತ್ರಿ ಸಿದ್ದgರಾಮಯ್ಯ ಅವರು ಜ್ಯೋತಿಷ್ಯ ಕಲಿಯುತ್ತಿರಬೇಕು. ಹಾಗಾಗಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಾರೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು
ನಮ್ಮ ಮುಖ್ಯಮಂತ್ರಿಗಳು ಕೋವಿಡ್ ಹಾಗೂ ಉಳಿದ ಪರಿಸ್ಥಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಇನ್ನು ಎರಡೂವರೆ ವರ್ಷ ಆಡಳಿತ ನಡೆಸುತ್ತಾರೆ ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೇ ಹೇಳಿದ್ದಾರೆ. ಹಾಗಾಗಿ ನಮಗೆ ಶಾ ಅವರ ಸರ್ಟಿಫಿಕೇಟ್ ಸಾಕು. ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ ಎಂದರು.
ಬೆಂಗಳೂರು ಅಭಿವೃದ್ಧಿ ಸಿಡಿ ಮಾತ್ರ ಗೊತ್ತು
ನನಗೆ ಯಾವುದೇ ಸಿಡಿ ಬಗ್ಗೆ ಮಾಹಿತಿ ಇಲ್ಲ. ನನಗೆ ಗೊತ್ತಿರುವುದು ಬೆಂಗಳೂರು ಅಭಿವೃದ್ಧಿಯ ಸಿಡಿ. ಮುಖ್ಯಮಂತ್ರಿಗಳು ಈಗಾಗಲೇ 2 ಸಭೆ ನಡೆಸಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ. ಅದಕ್ಕೊಂದು ರೂಪುರೇಷೆ ನೀಡಿ ಸಂಬಂಧಿಸಿದ ಸಿಡಿಯನ್ನು ನಮಗೆ ಕಳುಹಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು.
ಕೋವಿಡ್ ಹಿನ್ನೆಲೆಯಲ್ಲಿ ಅನೇಕ ತಿಂಗಳು ಅಭಿವೃದ್ಧಿ ಕುಂಠಿತಗೊಂಡಿತ್ತು. ಆದರೆ, ಈಗ ಎಲ್ಲವೂ ಪ್ರಾರಂಭವಾಗಿದ್ದು, ಪ್ರತೀ ಕ್ಷೇತ್ರಕ್ಕೆ ಲೋಕೋಪಯೋಗಿಯಿಂದ ತಲಾ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ