May 20, 2022

Newsnap Kannada

The World at your finger tips!

prathp siddu

ಅಧಿಕಾರಕ್ಕಾಗಿ ಸಿದ್ದರಾಮಯ್ಯ ಸಿದ್ದರಹೀಮ್ ಅಯ್ಯನೂ ಆಗ್ತಾರೆ: ಪ್ರತಾಪ್‍ಸಿಂಹ ವಾಗ್ದಾಳಿ

Spread the love

ಅಧಿಕಾರಕ್ಕಾಗಿ ಸಿದ್ದರಾಮಯ್ಯ ಅವರು ಸಿದ್ದರಹೀಮ್ ಅಯ್ಯ ಎಂದು ಬೇಕಾದರೂ ಹೆಸರು ಬದಲಾಯಿಸಿಕೊಳ್ಳುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ಮಾಡಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಹ, ಹಿಜಬ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಡಿ. ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜ ಪೇಟೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಅವರು ಹೆಸರನ್ನು ಬದಲಾಯಿಸಿಕೊಳ್ಳಲು ಸಿದ್ಧರಿದ್ದಾರೆ ಎಂದು ಕಿಡಿಕಾರಿದರು.

ಒತ್ತಡ, ಟೀಕಾಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರ್ಕಾರ ಬದ್ಧವಾಗಿರೋದು ಒಳ್ಳೆಯ ಸಂದೇಶ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪಾಗಿದೆ. ಆದರೆ ಹಿಜಬ್‍ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ ಎಂದು ಪ್ರಶ್ನಿಸಿದರು.

ಹಿಜಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ. ಅಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು ಎಂದು ಟೀಕಿಸಿದರು.

error: Content is protected !!