ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಬಗ್ಗೆ ಸಹಾನೂಭೂತಿ ಇಟ್ಟುಕೊಳ್ಳಬೇಕು. ಕುಮಾರಸ್ವಾಮಿ ಅವರೂ ಕೂಡ ಸಿದ್ದರಾಮಯ್ಯ ಅವರ ವಿಚಾರವಾಗಿ ಹೆಚ್ಚು ಮಾತನಾಡಬಾರದು ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಮಂಡ್ಯ ಜಿಲ್ಲೆಯ ಕೊಪ್ಪ ದಲ್ಲಿ ಸಲಹೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಶಿವರಾಮೇಗೌಡರು ಸಿದ್ದರಾಮಯ್ಯ ಜೆಡಿಎಸ್ ಮೂಲದಿಂದ ಬೆಳೆದು ಬಂದವರು. ಸಿದ್ದರಾಮಯ್ಯ ಅವರಿಗೆ ಸಿಟ್ಟು ಜಾಸ್ತಿ, ನಮ್ಮ ಕುಮಾರಸ್ವಾಮಿ ಅವರು ಸುಮ್ಮನೆ ಇರದೇ ಜಾಡಿಸಿ ಬಿಡುತ್ತಾರೆ. ಅಣ್ಣ ತಮ್ಮಂದಿರ ಜಗಳದಂತೆ ಇಬ್ಬರ ಜಗಳ ನಡೆಯುತ್ತಲೇ ಇರುತ್ತದೆ ಎಂದರು.
ಸಿದ್ದರಾಮಯ್ಯ ಒಳ್ಳೆಯ ವಾಗ್ಮಿ, ಜನಪರ ಆಡಳಿತ ಕೊಡುವ ಶಕ್ತಿ ಇರುವ ಮನುಷ್ಯ ನಮ್ಮ ಜೆಡಿಎಸ್ ಬಗ್ಗೆ ಅವರಿಗೆ ಸಾಫ್ಟ್ ಕಾರ್ನರ್ ಇರಬೇಕು. ಉಂಡ ಮನೆ, ಬೆಳೆದ ಮನೆ ಇವೆಲ್ಲನ್ನು ನೋಡಿಕೊಳ್ಳಬೇಕು ಎಂದರು.
ಎರಡು ರಾಷ್ಟ್ರೀಯ ಪಕ್ಷಗಳು ದೊಂಬರಾಟದಲ್ಲಿ ಮುಳುಗೋಗಿವೆ. ಮೇ ವೇಳೆಗೆ ರಾಜ್ಯದ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಕಾಣಲಿದೆ. ಕಾಂಗ್ರೆಸ್‍ನಿಂದ ಬಿಜೆಪಿಗೆ 15 ಮಂದಿ ಬರುತ್ತಾರೆ ಅಂತ ಬೆಳಗಾವಿ ಸಾಹುಕಾರರು ಹೇಳುತ್ತಾರೆ. ಬಿಜೆಪಿಯಿಂದ ಕಾಂಗ್ರೆಸ್‍ಗೆ 25 ಮಂದಿ ಬರುತ್ತಾರೆ ಎನ್ನುವುದನ್ನು ಸಹ ನೋಡಿದ್ದೇವಿ. ಯಾರ್ಯಾರು ಯಾವ ಯಾವ ಪಕ್ಷಕ್ಕೆ ಹೋಗುತ್ತಾರೆ ಇನ್ನು 6 ತಿಂಗಳು ಗೊತ್ತಾಗಲ್ಲ. 6 ತಿಂಗಳ ಬಳಿಕ ಹೋಗುವವರು ಬರುವವರು ಗೊತ್ತಾಗುತ್ತದೆ ಎಂದಿದ್ದಾರೆ.
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
More Stories
ಸಂಕ್ರಾಂತಿ….
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ